ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ಅಗತ್ಯ

sid
Published on

ವಿಜಯವಾಣಿ ಸುದ್ದಿಜಾಲ ಆರ್ಡಿ ಹಳೇ ವಿದ್ಯಾರ್ಥಿಗಳು, ದಾನಿಗಳು, ಸ್ಥಳೀಯರು, ಪಾಲಕರು, ಎಸ್‌ಡಿಎಂಸಿ. ಶಿಕ್ಷಕ ವೃಂದವರ ಒಗ್ಗಟ್ಟು, ಸಹಕಾರಗಳಿಂದ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಾಧ್ಯವಿದೆ. ಆರ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಆಚರಣೆ ಹೊಸ್ತಿನಲ್ಲಿರುವುದು ಪ್ರಶಂಸನೀಯ ಈ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಎಲ್ಲರ ಸಹಕಾರದ ಅಗತ್ಯವಿದೆ ಎಂದು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯದೇವ ಹೆಗ್ಡೆ ನೂಜಟ್ಟು ಹೇಳಿದರು. ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಾಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತ ಮುಖ್ಯಶಿಕ್ಷಕ ಬಾಬು ಶೆಟ್ಟಿ ಜಗ್ಲುಗುಡ್ಡೆ, ಶಿಕ್ಷಕ ಗಣೇಶ ಹೇರರ್ಳೆ, ಹಳೇ ವಿದ್ಯಾರ್ಥಿ ಬಾಲಕೃಷ್ಣ ಶೆಣೈ, ಸುರೇಶ ಶೆಟ್ಟಿ, ಪ್ರಕಾಶ ಶೆಣೈ, ರೋಹಿತ್‌ಕುಮಾರ್ ಶೆಟ್ಟಿ, ಸುದರ್ಶನ್ ಶೆಟ್ಟಿ, ನಿಶಾಂತ್ ಶೆಟ್ಟಿ,ಕೃಷ್ಣ ಪುತ್ರನ್, ಕೃಷ್ಣಮೂರ್ತಿ ಆಚಾರ್ಯ, ಪ್ರಹ್ಲಾದ್ ಶೆಟ್ಟಿ, ವಿನಯ ಶೆಟ್ಟಿ, ದಿನೇಶ್ ನಾಯ್ಕ, ಲಕ್ಷ್ಮಣ ನಾಯ್ಕ, ಕೃಷ್ಣಮೂರ್ತಿ ಆಚಾರ್ಯ, ಪ್ರಮೋದ್ ಶೆಟ್ಟಿ, ದಿನೇಶ್, ಪತ್ರಕರ್ತ ಕೆ.ಸಂಜೀವ ಆರ್ಡಿ, ಮುಖ್ಯಶಿಕ್ಷಕಿ ಯಶೋಧ, ಹಿರಿಯ ಶಿಕ್ಷಕಿ ಪ್ರೇಮಾವತಿ, ಹಳೇ ವಿದ್ಯಾರ್ಥಿಗಳು, ಮಕ್ಕಳ ಪಾಲಕರು, ಸ್ಥಳೀಯರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಯಶೋಧ ಸ್ವಾಗತಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುದರ್ಶನ ಶೆಟ್ಟಿ ಆರ್ಡಿ ನಿರೂಪಿಸಿದರು. ಸುರೇಶ್ ಶೆಟ್ಟಿ ಆರ್ಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net