More

    ರಾಜಕೀಯ ಪಕ್ಷಗಳ ಸಹಕಾರ ಅಗತ್ಯ

    ರಾಯಚೂರು: ಶಾಂತಿಯುತ ಹಾಗೂ ಪಾರದರ್ಶನ ಚುನಾವಣೆ ನಡೆಸಲು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ರಾಜಕೀಯ ಪಕ್ಷಗಳು ನಿಯಮಗಳನ್ನು ಪಾಲಿಸಬೇಕು ಎಂದು ಚುನಾವಣಾ ವೀಕ್ಷಕ ಅಜಯ್ ಪ್ರಕಾಶ ಹೇಳಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಗಳೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಚಾರ ಸಭೆಯಲ್ಲಿ ಯಾವುದೇ ಧರ್ಮ, ಸಮುದಾಯವನ್ನು ನಿಂಸುವ ಮಾತುಗಳನ್ನಾಡಬಾರದು ಎಂದರು.
    ಚುನಾವಣೆ ಪ್ರಚಾರಕ್ಕೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಸೂಕ್ತ ಭದ್ರತೆ ಒದಗಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ಆಯಾ ಪಕ್ಷಗಳ ಮುಖಂಡರು ನೋಡಿಕೊಳ್ಳಬೇಕು ಎಂದು ಹೇಳಿದರು.
    ಸಭೆಯಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ,ಸಹಾಯಕ ಆಯುಕ್ತರಾದ ಅವಿನಾಶ ಸಿಂಧೆ, ಎಸ್.ಎಸ್.ಸಂಪಗಾವಿ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts