ನಿರ್ಮಲ ಗ್ರಾಮಕ್ಕೆ ಗ್ರಾಮಸ್ಥರ ಸಹಕಾರ

Ism_clean village
Published on

ಪುತ್ತೂರು ಗ್ರಾಮಾಂತರ: ಪುತ್ತೂರನ್ನು ಸ್ವಚ್ಛ ತಾಲೂಕು ಮಾಡುವ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನವು 10 ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾದರೆ ಪ್ರತಿ ಗ್ರಾಮಸ್ಥನ ಸಹಕಾರ ಅಗತ್ಯ ಎಂದು ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್ ಭಂಡಾರಿ ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಜಿಲ್ಲಾ ನೆರವು ಘಟಕ, ದ.ಕ. ಜಿಲ್ಲಾ ಪಂಚಾಯಿತಿ, ಪುತ್ತೂರು ತಾಪಂ ಮತ್ತು ಒಳಮೊಗ್ರು ಗ್ರಾಪಂ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಒಳಮೊಗ್ರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ದಿನ ನಡೆಯುವ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಕುಂಬ್ರ ಜಂಕ್ಷನ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.

ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮಾತನಾಡಿದರು. ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಗ್ರಾಮ ಆಡಳಿತಾಧಿಕಾರಿ ಸುಮನ್, ಪಂಚಾಯಿತಿ ಕಾರ್ಯದರ್ಶಿ ಜಯಂತಿ ಮತ್ತಿತರರು ಇದ್ದರು. ಪಿಡಿಒ ಮನ್ಮಥ ಅಜಿರಂಗಳ ಸ್ವಾಗತಿಸಿದರು.

ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮಸ್ಥರು ಸ್ವಚ್ಛತಾ ಶ್ರಮದಾನದಲ್ಲಿ ಭಾಗವಹಿಸಿದ್ದರು. ಮೊದಲನೆಯ ದಿನ ಕುಂಬ್ರ ಜಂಕ್ಷನ್ ವ್ಯಾಪ್ತಿಯ ಸುತ್ತಮುತ್ತಲಿನ ಭಾಗದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net