More

    ಚನ್ನಗಿರಿಯ ಎಚ್.ಎಸ್.ಶಿವಕುಮಾರ್‌ಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ

    ಚನ್ನಗಿರಿ: ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಚನ್ನಗಿರಿ ತುಮ್‌ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಅವರು ಶೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆ ಸೋಮವಾರ ಬೆಂಗಳೂರಿನ ಪ್ರಿನ್ಸ್‌ಸ್ ಗಾಲ್ಫ್ ಗೇಟ್ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಂಯಕ್ತ ಸಹಕಾರಿ 22ನೇ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಸಹಕಾರಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ ಮಾತನಾಡಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು 62 ಲಕ್ಷಕ್ಕಿಂತ ಹೆಚ್ಚಿನ ಸದಸ್ಯರನ್ನು ಹೊಂದಿದ್ದು, 6 ಸಾವಿರಕ್ಕಿಂತ ಹೆಚ್ಚಿನ ಸಹಕಾರಿಗಳ ನೋಂದಣಿ ಆಗಿದೆ. ಇದರ ವ್ಯಾಪ್ತಿಯಲ್ಲಿ 18 ಪಟ್ಟಣ ಸಹಕಾರ ಬ್ಯಾಂಕ್‌ಗಳು ಬರುತ್ತವೆ ಎಂದು ಹೇಳಿದರು.

    ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 2 ಸಾವಿರ ಸೌಹರ್ದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಹಕಾರಿ ಆಡಳಿತ ಮಂಡಳಿ ಅವರು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸುದೀರ್ಘ ಸೇವೆ ಗುರುತಿಸಿ ತುಮ್‌ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಅವರನ್ನು ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts