More

    ಸಹಕಾರಿ ರಂಗದ ಬೆಳವಣಿಗೆಗೆ ಬದ್ಧ

    ಮುನವಳ್ಳಿ: ಮುಂದಿನ ದಿನಗಳಲ್ಲಿ ಸಹಕಾರಿ ರಂಗದಲ್ಲಿ ಪಕ್ಷಾತೀತ, ಜಾತ್ಯತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಭರವಸೆ ನೀಡಿದರು.

    ಪಟ್ಟಣದ ಶ್ರೀ ಪಂಚಲಿಂಗೇಶ್ವರ ಹಿರಿಯ ನಾಗರಿಕರ ವೇದಿಕೆ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಕಟ್ಟಡ ನಿರ್ಮಾಣವನ್ನು ಮುಂಬರುವ ದಿನಗಳಲ್ಲಿ ನಿರ್ಮಿಸುವುದಾಗಿ ಹೇಳಿದರು. ಬಿಡಿಸಿಸಿ ಬ್ಯಾಂಕ್‌ಗೆ ಅವಿರೋಧ ಆಯ್ಕೆ ಮಾಡುವಲ್ಲಿ ಶ್ರಮಿಸಿದ ಎಲ್ಲ ಗಣ್ಯಮಾನ್ಯರಿಗೆ ಅಭಿನಂದನೆ ಸಲ್ಲಿಸಿದರು.

    ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಚನಗೌಡ ದ್ಯಾಮನಗೌಡರ ಮಾತನಾಡಿ, ಡಿಸಿಸಿ ಬ್ಯಾಂಕ್ ಗೆ ನಾಲ್ಕನೇ ಬಾರಿಗೆ ಆಯ್ಕೆ ಮಾಡುವಲ್ಲಿ ಶ್ರಮಿಸಿದ ಎಲ್ಲ ನಾಯಕರಿಗೆ ಕೃತಜ್ಞತೆ ಸಲ್ಲಿಸಿ, ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

    ಇದೇ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್‌ಗೆ ಅವಿರೋಧವಾಗಿ ಆಯ್ಕೆಯಾದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಹಕಾರಿ ಧುರೀಣ ಪಂಚನಗೌಡ ದ್ಯಾಮನಗೌಡರ, ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಜಯ ಅಮಠೆ, ರೇಣವ್ವ ಭಜಂತ್ರಿ ಹಾಗೂ ಜಂಗಮ ಸಮಾಜದ ಹಿರಿಯರಾದ ವೇ.ಮೂ.ಶ್ರೀ ಚಂದ್ರಯ್ಯಸ್ವಾಮೀಜಿ ವಿರಕ್ತಮಠ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಐ.ಜಿ.ಚಂದರಗಿ ಅಧ್ಯಕ್ಷತೆ ವಹಿಸಿದ್ದರು. ರಮೇಶ ಗೋಮಾಡಿ, ಬಸನಗೌಡ ದ್ಯಾಮನಗೌಡರ, ಬಸವರಾಜ ದೇವಣಗಾಂವಿ, ತಿರಕಪ್ಪ ಕಾಶಪ್ಪಗೋಳ, ನಿವೃತ್ತ ಶಿಕ್ಷಕ ಎಚ್.ಬಿ.ಅಸೂಟಿ. ಐ.ಬಿ.ಸಂಕಣ್ಣವರ, ನಿವೃತ್ತ ಶಿಕ್ಷಕ ವೈ.ಎಫ್.ಶ್ಯಾನಭೋಗ, ರಾಜೇಶ್ವರಿ ಬಾಳಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts