More

    ಸಮಾಜದ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

    ರಾಯಚೂರು: ಎಲ್ಲ ರೀತಿಯ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಲು ಸಹಕಾರಿ ಕ್ಷೇತ್ರ ಸಹಕಾರಿಯಾಗಿದ್ದು, ಸಮಾಜದಲ್ಲಿನ ಹಲವಾರು ಬದಲಾವಣೆಗೆ ಸಹಕಾರಿ ಸಂಸ್ಥೆಗಳು ಕಾರಣವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
    ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
    ಸಮಾನತೆ ಸಹಕಾರಿ ಕ್ಷೇತ್ರದ ಶಕ್ತಿಯಾಗಿದ್ದು, ಎಲ್ಲರ ಸಹಭಾಗಿತ್ವದಲ್ಲಿ ವಿಶ್ವಾಸದಿಂದ ತೊಡಗಿಸಿಕೊಂಡಿರುವುದು ಕ್ಷೇತ್ರದ ಬೆಳವಣಿಗೆಗೆ ಕಾರಣವಾಗಿದೆ. ಸಂಸ್ಥೆ ಬೆಳೆಯಲು ಪ್ರಾಮಾಣಿಕತೆ, ನಿಸ್ವಾರ್ಥತತೆ, ಸಮಾಜದ ಬಗ್ಗೆ ಕಳಕಳಿ ಇದ್ಧಾಗ ಮಾತ್ರ ಸಂಸ್ಥೆ ಬೆಳೆಯಲು ಸಾಧ್ಯವಿದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
    ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಪಂಚವಾರ್ಷಿಕ ಯೋಜನೆಗಳಲ್ಲಿಯೂ ಸಹಕಾರಿ ಕ್ಷೇತ್ರದ ಬೆಳೆವಣಿಗೆಗೆ ಒತ್ತು ನೀಡಲಾಗಿತ್ತು. ರಾಜ್ಯದಲ್ಲಿ 2.30 ಕೋಟಿ ಸಹಕಾರಿ ಸದಸ್ಯರಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸದಸ್ಯತ್ವದಲ್ಲಿ ಹಿಂದುಳಿದಿದೆ.
    ಯುವಕರು, ಉತ್ಸಾಹಿಗಳು ಇಂದು ಸಹಕಾರಿ ಕ್ಷೇತ್ರದಲ್ಲಿ ತೋಡಗಿಸಿಕೊಂಡಿದ್ದು, ಸದಸ್ಯತ್ವ ನೋಂದಣಿಗೆ ಇನ್ನೂ ಹೆಚ್ಚಿನ ಪ್ರಯತ್ನ ಪಡಬೇಕಾಗಿದೆ ಎಂದು ತಿಳಿಸಿದರು.
    ಮಾಜಿ ಸಚಿವ ಹಾಗೂ ಕೆಒಎ್ ಅಧ್ಯಕ್ಷ ವೆಂಕಟರಾವ್ ನಾಡಗೌಡ ಮಾತನಾಡಿ, ಸಹಕಾರಿ ರಂಗ ಬೃಹದಾಕಾರವಾಗಿ ಬೆಳೆದಿದ್ದರೂ ಅದರ ಉಪಯೋಗ ಇನ್ನೂ ಬಹಳಷ್ಟು ಜನರಿಗೆ ಮುಟ್ಟಿಲ್ಲ. ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಎಲ್ಲ ರೀತಿಯ ವ್ಯವಹಾರ ನಡೆಸಲು ಸರ್ಕಾರ ಅವಕಾಶ ನೀಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
    ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಸಹಕಾರಿ ಸಂಸ್ಥೆಗಳ ಪದಾಕಾರಿ ಹಾಗೂ ಹಿರಿಯ ಸಹಕಾರಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಮಹಾಮಂಡಳದ ಸಂಚಿಕೆ ಮತ್ತು ಕೆಒಎ್ನಿಂದ ನೂತನವಾಗಿ ಹೊರತರಲಾದ ಶುದ್ಧ ಕುಡಿಯುವ ನೀರಿನ ಬಾಟಲಿಗಳನ್ನು ಉದ್ಘಾಟಿಸಲಾಯಿತು.
    ಕಾರ್ಯಕ್ರಮದಲ್ಲಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಕರೆಮ್ಮ ನಾಯಕ, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ಮಹಾಮಂಡಳ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್, ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಸ್.ವಿಜಯಕುಮಾರ ಪಾಟೀಲ್, ಕೆಒಎ್ ಉಪಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಸಹಕಾರ ಸಂಘಗಳ ಜಂಟಿ ನಿಬಂಧಕ ವಿಶ್ವನಾಥ ಮಲಕೋಡ, ಉಪ ನಿಬಂಧಕ ಎಂ.ಆರ್.ಮನೋಹರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts