More

    ಸಹಕಾರಿಗಳಿಗೆ ಕಾಯ್ದೆಯಲ್ಲಿನ ಬದಲಾವಣೆ ಅರಿವು ಅಗತ್ಯ

    ರಾಯಚೂರು: ಸರ್ಕಾರ ಸಹಕಾರ ಕ್ಷೇತ್ರಕ್ಕೆ ಸಂಬಂಸಿದಂತೆ ಕಾಯ್ದೆ, ನಿಯಮಗಳನ್ನು ಕಾಲಕಾಲಕ್ಕೆ ಬದಲಾವಣೆ ಮಾಡುತ್ತಿದ್ದು, ಬದಲಾವಣೆಯ ಕುರಿತು ಸಹಕಾರಿಗಳು ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಡಾ.ಶೇಖರಗೌಡ ಮಾಲಿಪಾಟೀಲ್ ಹೇಳಿದರು.
    ಸ್ಥಳೀಯ ಕೊಠಾರಿ ಪಂಕ್ಷನ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಸಹಕಾರ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ಕಲಬುರಗಿ ವಿಭಾಗದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರಿಗಾಗಿ ಏರ್ಪಡಿಸಿದ್ದ ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ರಾಜ್ಯ ಸರ್ಕಾರ ಪ್ರಸ್ತುತ ತರಲು ಹೊರಟಿರುವ ಸಹಕಾರಿ ಕಾಯ್ದೆ ತಿದ್ದುಪಡಿ ಬಗ್ಗೆ ಅಸಮಾಧಾನಗಳಿವೆ. ತಿದ್ದುಪಡಿ ಕಾಯ್ದೆಯ ಬಗ್ಗೆ ಸಹಕಾರಿಗಳು ತಮ್ಮ ಆಶಯಗಳನ್ನು ತಿಳಿಸಿದರೆ ಅದನ್ನು ಸರ್ಕಾರಕ್ಕೆ ಮುಟ್ಟಿಸುವ ಕೆಲಸವನ್ನು ಮಹಾಮಂಡಳ ಮಾಡಲಿದೆ.
    ಪತ್ತಿನ ಸಹಕಾರ ಸಂಘಗಳಲ್ಲಿ ಕ್ರೆಡಿಟ್ ವಲಯ ಅತ್ಯಂತ ಪ್ರಮುಖವಾಗಿದ್ದು, ಸಂಘಗಳು ಜನರ ನಂಬಿಕೆಯನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು. ಪ್ರಾಮಾಣಿಕ ಮತ್ತು ಪಾರದರ್ಶಕ ವ್ಯವಸ್ಥೆಯ ಮೂಲಕ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ಕೆಲಸ ಮಾಡಬೇಕು.
    ಮಹಾಮಂಡಳ 100ಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಜಿಎಸ್‌ಟಿಗೆ ಸಂಬಂಸಿದಂತೆ ಹೋರಾಟ ಮಾಡುವ ಮೂಲಕ ವಿನಾಯಿತಿ ಪಡೆದು ಅಲ್ಪ ಮಟ್ಟಿಗೆ ಯಶಸ್ಸು ಕಂಡಿದ್ದೇವೆ ಎಂದು ಡಾ.ಶೇಖರಗೌಡ ಮಾಲಿಪಾಟೀಲ್ ಹೇಳಿದರು.
    ಸಹಕಾರ ಸಂಘಗಳ ಜಂಟಿ ನಿಬಂಧಕ ವಿಶ್ವನಾಥ ಮಲಕೂಡ ಮಾತನಾಡಿ, ಸಂಘಗಳ ಪದಾಕಾರಿಗಳು ಸಾಲ ನೀಡುವಾಗ ಸಾಲ ಪಡೆದಾತ ಸಾಲ ವಾಪಸ್ ನೀಡುವ ಮನೋಭಾವ ಹೊಂದಿದ್ದಾನೆಯೇ ಎಂಬುದನ್ನು ನೋಡಬೇಕು. ಬೇಕಾಬಿಟ್ಟಿಯಾಗಿ ಸಾಲ ನೀಡಿದರೆ ಮುಂದೆ ಸಮಸ್ಯೆಯಾಗಲಿದೆ.
    ಸಹಕಾರಿ ಕ್ಷೇತ್ರದಲ್ಲಿ ತಪ್ಪುಗಳಾದರೆ ಆಡಳಿತ ಮಂಡಳಿ ಜತೆಗೆ ಸಿಬ್ಬಂದಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುತ್ತಿದೆ. ಕಾರಣ ಸಾಲ ನೀಡುವಾಗ ಎಚ್ಚರಿಕೆ ವಹಿಸುವುದರ ಜತೆಗೆ ಠೇವಣಿ ಸಂಗ್ರಹಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಸಲಹೆ ನೀಡಿದರು.
    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಪಾಟೀಲ್ ಶಾವಂತಗೇರಿ ಮಾತನಾಡಿ, ಪತ್ತಿನ ಸಹಕಾರ ಸಂಘಗಳನ್ನು ನಡೆಸುವುದು ಸುಲಭದ ಕೆಲಸವಲ್ಲ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ನಿವಾರಿಸಲು ಅನುಕೂಲವಾಗಲಿದೆ. ತರಬೇತಿ ಕಾರ್ಯಾಗಾರದಲ್ಲಿ ಸಮಸ್ಯೆಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು ಎಂದು ತಿಳಿಸಿದರು.
    ಈ ಸಂದರ್ಭದಲ್ಲಿ ಸಹಕಾರ ಸಂಘಗ ಉಪ ನಿಬಂಧಕ ಎಂ.ಆರ್.ಮನೋಹರ, ಸಹಾಯಕ ನಿಬಂಧಕ ಶೇಖ್ ಹುಸೇನ್, ಕಲಬುರಗಿಯ ಕೆಐಸಿಎಂನ ಪ್ರಾಚಾರ್ಯ ಅರುಣಕುಮಾರ ಹರಸೂರು, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಶಶಿಧರ ಎಲೆ, ಕೃಷಿ ವಿಜ್ಞಾನಗಳ ವಿವಿಯ ನಿವೃತ್ತ ಪ್ರಾಧ್ಯಾಪಕ ರವೀಂದ್ರ ಪಾಟೀಲ್ ಹಾಗೂ ವಿಭಾಗದ ಏಳು ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಪದಾಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts