More

    ಮಹಿಳೆಯರ ಮೇಲೆ ಪೊಲೀಸರ ದಾಳಿ; ಮನಸೋ ಇಚ್ಛೆ ಥಳಿತ

    ರಾಯ್​ಪುರ: ಒತ್ತುವರಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾದ ಮಹಿಳೆಯರ ಮೇಲೆ ಪೊಲೀಸರು ಹಲ್ಲೆ ನಡೆಸಿ ದೌಜನ್ಯ ಎಸಗಿರುವ ಘಟನೆ ಛತ್ತೀಸ್​ಗಢದ ಸೂರಜ್​ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

    ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳ್ಲಲಿ ವೈರಲ್​ ಆಗಿದ್ದು ನೆಟ್ಟಿಗರು ಪೊಲೀಸರು ನಡೆಗೆ ಕಿಡಿಕಾರಿದ್ದಾರೆ ಮತ್ತು ನ್ಯಾಯಾಕ್ಕಾಗಿ ಆಗ್ರಹಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ತಿಲಸಿವಾ ಗ್ರಾಮದ ಮಹಿಳೆಯರು ದಾಳಿ ಮಾಡಿದ್ದರು. ಅಧಿಕಾರಿಗಳ ದೂರಿನ ಮೇರೆಗೆ ಅವರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಚುನಾವಣೆಗೂ ಮುನ್ನ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್​ ಸ್ಪೋಟ; ಬಾಲಕಿಗೆ ಗಂಭೀರ ಗಾಯ

    ಜಾನುವಾರುಗಳಿಗೆ ನಿರ್ಮಿಸಲಾಗಿದ್ದ ಶೆಡ್​ನಲ್ಲಿ ಕೆಲವರು ಅತಿಕ್ರಮಣ ಮಾಡಿದ್ದರು ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಅಧಿಕಾರಿಗಳ ಮೇಲೆ ದಾಳಿ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುಲಿಕಾ ಶರ್ಮಾ ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಗಾಯಾಳು ಮಹಿಳೆ ಒಬ್ಬರು ನಾವು ಹಲವು ವರ್ಷಗಳಿಂದ ಈ ಜಾಗದಲ್ಲಿ ವಾಸವಿದ್ದೇವೆ ಆಗ ಯಾರು ಬಂದು ಖಾಲಿ ಮಾಡಿ ಎಂದು ಹೇಳಿರಲಿಲ್ಲ. ಪೊಲೀಸ್​ ಅಧಿಕಾರಿಗಳು ಗರ್ಭಿಣಿ ಮಹಿಳೆಯರ ಮೇಲೂ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ ಎಂದು ಹೇಳಿದ್ದಾರೆ.

    ಸದ್ಯ ಮಹಿಳೆಯರ ಮೇಲಿನ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts