ಕೊಲ್ಕತ್ತ ಹತ್ಯೆ ಕೇಸ್​ಗೆ ಹೊಸ ಟ್ವಿಸ್ಟ್​! ಬೆಚ್ಚಿಬೀಳಿಸುವಂತಿದೆ ಮೃತ ವೈದ್ಯೆ ತಂದೆ ಬಿಚ್ಚಿಟ್ಟ ಸಂಗತಿ

ಕೊಲ್ಕತ್ತ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯ ತನಿಖೆ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್​ ಘೋಷ್​​ ಮತ್ತು ಸೆಕ್ಯೂರಿಟಿ ಆಫೀಸರ್​ ಆಗಿ ಕೆಲಸ ಮಾಡುತ್ತಿದ್ದ ಅಫ್ಸರ್ ಅಲಿ ಖಾನ್ ಹಾಗೂ ಆಸ್ಪತ್ರೆಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬಿಪ್ಲಬ್ ಸಿಂಗ್ ಮತ್ತು ಸುಮನ್ ಹಜ್ರಾರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದರು. ಸದ್ಯ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತಷ್ಟು ಚುರುಕುಗೊಳಿಸುವ ಮೂಲಕ ಮಗಳನ್ನು ಕಳೆದುಕೊಂಡ ಪೋಷಕರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ. ಆದ್ರೆ, ಇದೀಗ ಮೃತ ಟ್ರೈನಿ ವೈದ್ಯೆ ಪೋಷಕರ ಹೇಳಿಕೆಯೊಂದು ಸದ್ಯ ಭಾರೀ ಅಚ್ಚರಿ ಮೂಡಿಸಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಕೊಟ್ಟಂತಿದೆ.

ಇದನ್ನೂ ಓದಿ: ಬೆಳೆ ಸಮೀಕ್ಷೆ , ನಿಖರ ಮಾಹಿತಿ ನೀಡಿ

ಮಗಳನ್ನು ನೆನೆದು ಕಣ್ಣೀರಿಟ್ಟ ತಂದೆ, “ಪೊಲೀಸರು ಮೊದಲಿನಿಂದಲೂ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ ಮತ್ತು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ತೆಗೆದುಕೊಂಡು ಹೋಗುವಾಗ ಪೊಲೀಸ್ ಠಾಣೆಯಲ್ಲಿ ನಾವು ಕಾದು ಕೂರಬೇಕಾಯಿತು. ಇದಾದ ಬಳಿಕ ನಮ್ಮ ಮಗಳ ಶವವನ್ನು ನಮಗೆ ಹಸ್ತಾಂತರಿಸುವ ವೇಳೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ ಕೊಡುವ ಮೂಲಕ ಲಂಚದ ಆಫರ್​ ಕೊಟ್ಟರು. ಆದ್ರೆ, ಅದನ್ನು ನಾನು ತಕ್ಷಣ ತಿರಸ್ಕರಿಸಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಈ ಹೇಳಿಕೆ ಭಾರೀ ಗೊಂದಲ ಹುಟ್ಟುಹಾಕಿದ್ದು, ತನಿಖೆಗೆ ಹೊಸ ದಾರಿ ಮಾಡಿಕೊಟ್ಟಿದೆ ಎಂದು ಹೇಳಬಹುದು.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದ ವೈದ್ಯಕೀಯ ಸಿಬ್ಬಂದಿ, ಆರೋಪಿಗಳ ವಿರುದ್ಧದ ಹೋರಾಟವನ್ನು ನಿರಂತರವಾಗಿ ಮುಂದುವರೆಸಿದ್ದರು. ಆಗಸ್ಟ್​ 16ರಂದು 24 ಗಂಟೆಗಳ ಕಾಲ ದೇಶವ್ಯಾಪಿ ಮೆಡಿಕಲ್ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಯನ್ನು ಒತ್ತಿ ಹೇಳಿದ್ದ ಮಹಿಳಾ ವೈದ್ಯರು, ಇಂದಿಗೂ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಆಯ್ಕೆ ಪಟ್ಟಿ ಪ್ರಕಟ

ಆ.14ರಂದು ಸಿಬಿಐಗೆ ವಹಿಸಿದ ಕೊಲ್ಕತ್ತಾ ಹೈಕೋರ್ಟ್​, ತನಿಖೆಯನ್ನು ಚುರುಕುಗೊಳಿಸುವಂತೆ ಆದೇಶಿಸಿತು. ಅದರ ಅನ್ವಯ ಆರ್​ಜಿ ಕರ್​ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್​ನನ್ನು ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಸತತ 15 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಆರೋಪಿ ಸಂದೀಪ್​ನನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಿ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು, ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ತನಿಖೆ ಚುರುಕಿನಿಂದ ಸಾಗಬೇಕು ಎಂಬ ಕೂಗು ದೇಶವ್ಯಾಪಿ ಕೇಳಿಬರುತ್ತಿದೆ,(ಏಜೆನ್ಸೀಸ್).

ಸರ್ಕಾರಕ್ಕೆ ಧೋನಿ, ವಿರಾಟ್​ ಕಟ್ಟಿದ ತೆರಿಗೆ ಮೊತ್ತ ಎಷ್ಟು ಗೊತ್ತಾ? ಕೇಳಿದ್ರೆ ಹುಬ್ಬೇರೋದು ಖಚಿತ!

‘ಡಿ ಗ್ಯಾಂಗ್’​ ವಿರುದ್ಧ ಚಾರ್ಚ್​ಶೀಟ್​ ಸಲ್ಲಿಕೆ: ರಕ್ತದ ಕಲೆ, 200ಕ್ಕೂ ಹೆಚ್ಚು ಸಾಕ್ಷ್ಯ! ಸ್ಫೋಟಕ ಸಂಗತಿ ಬಯಲು

Share This Article

ತಲೆಯಲ್ಲಿ ಎರಡು ಸುಳಿ ಇದ್ರೆ ಎರಡು ಮದ್ವೆ ಆಗ್ತಾರೆ! ನಿಜಕ್ಕೂ ಇದು ಸತ್ಯಾನಾ?

ಬೆಂಗಳೂರು:  ಪ್ರತಿಯೊಬ್ಬರ ತಲೆಯ ಮೇಲೆ ಸುಳಿಗಳಿರುವುದು ಸಾಮಾನ್ಯ. ಈ ಸುರುಳಿಗಳು ಹುಟ್ಟಿನಿಂದಲೇ ತಲೆಯ ಮೇಲೆ ಇರುತ್ತವೆ.…

ಸುಖವಾದ ನಿದ್ದೆ ಬೇಕೆಂದರೆ ಯೋಗದ ಮೊರೆಹೋಗಿ

ಪ್ರ:ಸರಿಯಾಗಿ ನಿದ್ರೆ ಬರುವುದಿಲ್ಲ. ರಾತ್ರಿ 2-3 ತಾಸು ನಿದ್ರೆ ಬಂದರೆ ಹೆಚ್ಚು. ಸುಖನಿದ್ರೆಗಾಗಿ ಯಾವ ಯೋಗ…

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…