More

    ಪೊಲೀಸರಿಂದ 34,000 ಕೆಜಿ ಸ್ಫೋಟಕ ವಶ: 100 ಜನರ ಬಂಧನ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು, ಕನಿಷ್ಠ 100 ಜನರನ್ನು ಬಂಧಿಸಿದ್ದಾರೆ. ಅಲ್ಲದೇ, ಈ ಕುರಿತು ಒಟ್ಟು 132 ಪ್ರಕರಣಗಳನ್ನು ದಾಖಲಿಸಲಾಗಿದೆ.

    ಇದನ್ನೂ ಓದಿ: ಈ ಶ್ವಾನದ ವಾರ್ಷಿಕ ಆದಾಯ ಎಷ್ಟು ಗೊತ್ತಾ?; ಕೋಟ್ಯಂತರ ಅಭಿಮಾನಿಗಳ ಮೆಚ್ಚಿನ ನಾಯಿ

    ರಾಜ್ಯದ ವಿವಿಧ ಸ್ಥಳಗಳಲ್ಲಿ ನಿನ್ನೆ ಮತ್ತು ಇಂದು ನಡೆದ ಪೊಲೀಸರ ದಾಳಿಗಳಲ್ಲಿ ಅಕ್ರಮ ಪಟಾಕಿ ಉತ್ಪಾದನೆಗೆ ಸಂಬಂಧಿಸಿದಂತೆ ಇದುವರೆಗೆ ನಾವು ಸುಮಾರು 34,000 ಕೆಜಿ ಸ್ಫೋಟಕ ವಶಪಡಿಸಿಕೊಂಡಿದ್ದೇವೆ. ರಾಜ್ಯದಲ್ಲಿ ಪಟಾಕಿ ಮಾರಾಟ ನಿಷೇಧಿಸಲಾಗಿದ್ದು, ಅವುಗಳನ್ನು ಸಂಗ್ರಹಿಸಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಆರೋಪದಲ್ಲಿ ಕನಿಷ್ಠ 100 ಜನರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಬಂಗಾಳದ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕಗಳ ಸ್ಫೋಟದ ಹಿನ್ನಲೆಯಲ್ಲಿ ಈ ದಾಳಿಗಳನ್ನು ನಡೆಸಲಾಗಿತ್ತು. ಈವರೆಗೆ ಬಂಗಾಳದಲ್ಲಿ ಮೂರು ಕಡೆ ಭೀಕರ ಸ್ಫೋಟ ಹಾಗೂ ಬೆಂಕಿಯ ಪರಿಣಾಮವಾಗಿ ಕನಿಷ್ಠ 17 ಜನರು ಮೃತಪಟ್ಟಿದ್ದಾರೆ. ಹಾಗಾಗಿ ಎಲ್ಲಾ ವ್ಯಾಪಾರಿಗಳು ತಮ್ಮ ಬಳಿ ಇರುವ ಎಲ್ಲಾ ಕಚ್ಚಾ ಸಾಮಗ್ರಿಗಳನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಠೇವಣಿ ಇಡುವಂತೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts