More

    ಕರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ವಾಸವಿದ್ದ ವಾರ್ಡ್​ ನಂಬರ್ 30 ಈಗ ಕಂಟೇನ್ಮೆಂಟ್ ಝೋನ್​

    ಕಲಬುರಗಿ: ರಾಜ್ಯದ್ಯಂತ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಿರುವುದರಿಂದ ಪ್ರಸ್ತುತ ಒಂದು ವಾರಗಳ ಕಾಲ ಜಿಲ್ಲೆಯಾದ್ಯಂತ ಅಘೋಷಿತ ಬಂದ್ ಜಾರಿಯಲ್ಲಿದೆ.ಇದು ಮುಂದಿನ ಒಂದು ತಿಂಗಳವರೆಗೆ ಮುಂದುವರೆಯುವ ಸಾಧ್ಯತೆ ಇದ್ದು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಕೇಳಿಕೊಂಡಿದ್ದಾರೆ.

    ಕಲಬುರಗಿಯ ಮೃತ ವ್ಯಕ್ತಿ ವಾಸದ ವಾರ್ಡ್ ನಂಬರ್ 30 ಕಂಟೇನ್ಮೆಂಟ್ ಝೋನ್ ಎಂದು ಪರಿಗಣಿಸಲಾಗಿದೆ. ಇಲ್ಲಿ ಸರ್ವೆಲೆನ್ಸ್ ತಂಡಗಳು 3 ಸಾವಿರ ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಹಾಗೂ ಸ್ಕ್ರೀನಿಂಗ್ ಕಾರ್ಯಕ್ರಮ ನಡೆಯುತ್ತಿದೆ. ಕಲಬುರಗಿ ರೈಲು ನಿಲ್ದಾಣ, ವಿಮಾನ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಜಾರಿಯಲ್ಲಿದೆ.

    ಮಾಸ್ ಮತ್ತು ಸ್ಯಾನಿಟೈಜರ್ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ರವಿವಾರ 11 ಮೆಡಿಕಲ್ ಅಂಗಡಿಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದೆ. ಇದರಲ್ಲಿ ಹೆಚ್ಚಿನ ದರ ಮಾಡುತ್ತಿದ್ದ 3 ಮೆಡಿಕಲ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

    ಎಸ್.ಎಸ್.ಎಲ್.ಸಿ. ಪರೀಕ್ಷೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿಗದಿಪಡಿಸುರುವ ವೇಳಾಪಟ್ಟಿಯಂತೆ ಕಲಬುರಗಿ ಜಿಲ್ಲೆಲ್ಲಿಯೂ ಸಹ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ ಎಂದು ಅಪರ ಜಿಲ್ಲಾಧಿಕಾರಿ ರಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ತೀರ್ಮಾನಿಸಿದೆ.

    ಮೃತ ವೃದ್ಧನ ಟ್ರಾವೆಲ್ ಹಿಸ್ಟರಿ ಬಹಿರಂಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts