More

    ಕರೊನಾ ಕುರಿತು ಜಾಗೃತಿ ಮೂಡಿಸಿ

    ಬೆಳಗಾವಿ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕರೊನಾ ವೈರಸ್ ಕುರಿತು ಜನರಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಜ್ವರ, ನೆಗಡಿ ಬಂದರೆ ಕರೊನಾ ಎಂದು ಜನರನ್ನು ಭಯ ಉಂಟು ಮಾಡುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷೃ ಮಾಡದೆ ಕ್ರಮ ವಹಿಸಬೇಕು ಎಂದು ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೂಚಿಸಿದರು.

    ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ನಾಲ್ಕೈದು ವಾರಗ ಳಿಂದ ಕರೊನಾ ವೈರಸ್ ಬಗ್ಗೆ ಸಾಮಾ ಜಿಕ ಜಾಲತಾಣಗಳಲ್ಲಿ ಭಯ ಉಂಟು ಮಾಡುವ ವದಂತಿಗಳು ಹೆಚ್ಚಾಗುತ್ತಿವೆ. ಅವುಗಳಿಗೆ ಕಡಿವಾಣ ಹಾಕಿ. ಜತೆಗೆ ಜನರಿಗೆ ಆರೋಗ್ಯ ರಕ್ಷಣೆ ಕುರಿತು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ ಎಂದು ತಿಳಿಸಿದರು.

    2019-20ನೇ ಸಾಲಿ ಶೈಕ್ಷಣಿಕ ಪೂರ್ಣಗೊಂಡು ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ಸಮರ್ಪಕವಾಗಿ ಸೌಲಭ್ಯಗಳು ಸಿಕ್ಕಿಲ್ಲ. ಕೆಲವು ಕೊಠಡಿಗಳ ದುರಸ್ತಿ ಆಗಲಿಲ್ಲ. ಅತಿಥಿ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ವೇತನ ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣದಿಂದಲೇ ಅನುದಾನ ಬಿಡುಗಡೆ ಮಾಡಬೇಕು. ಜತೆಗೆ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

    2019-20ನೇ ಸಾಲಿನ ಆರ್ಥಿಕ ವರ್ಷದ ಮುಗಿಯುತ್ತಿದ್ದರೂ ಕೈಗೊಂಡಿರುವ ಕಾಮಗಾರಿ ಪೂರ್ಣಗೊಂಡಿಲ್ಲ. ಮಾರ್ಚ್ ಅಂತ್ಯದ ಒಳಗಾಗಿ ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು. ಕೆಲವು ಯೋಜನೆಗಳಿಗೆ ವಿವಿಧ ಕಾರಣ ಮುಂದಿಟ್ಟುಕೊಂಡು ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಹಾಗಾಗಿ ತಕ್ಷಣ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ಅನುದಾನ ಬಳಕೆಯಲ್ಲಿ ನಿರ್ಲಕ್ಷೃ ಮಾಡಿದರೆ ಸದಸ್ಯರು ಸಮಸ್ಯೆ ಎದುರಿಸಬೇಕಾಗುತ್ತದೆ. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ಸಮಿತಿ ಸದಸ್ಯರು ಸೂಚಿಸಿದರು. ಸದಸ್ಯೆ ಲಕ್ಷ್ಮೀ ನಿಂಗಪ್ಪ ಕುರಬರ, ಸದಸ್ಯರಾದ ನಾರಾಯಣ ಕಾರ್ವೇಕರ, ಕೃಷ್ಣಪ್ಪ ಬಾಲಪ್ಪ ಲಮಾಣಿ, ಜಿಪಂ ಯೋಜನಾಧಿಕಾರಿ ವಿನೋದ ಅಣ್ವೇಕರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    2019-20ನೇ ಸಾಲಿನ ಬಿಡುಗಡೆಯಾಗಿರುವ ಅನುದಾನವನ್ನು ಮಾ. 31ರ ಒಳಗಾಗಿ ಬಳಕೆ ಮಾಡಬೇಕು. ಅನುದಾನ ಬಳಕೆ ವಾಪಸ್ ಕಳುಹಿಸಿದರೆ ಅಂತಹ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಕಲ್ಪಿಸಿ.
    | ಡಿ.ಎಂ. ಜಕ್ಕಪ್ಪಗೋಳ, ಜಿಪಂ ಕಾರ್ಯದರ್ಶಿ

    14ನೇ ಹಣಕಾಸಿನ ಯೋಜನೆಯಡಿಯಲ್ಲಿ ಕುಡಿಯುವ ನೀರಿಗಾಗಿ ಶೇ. 40ರಷ್ಟು ಅನುದಾನ ಮೀಸಲಿಡಲಾಗುತ್ತಿದೆ. ಹಾಗಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಬೇಕು. ನಿರ್ಲಕ್ಷೃವಹಿಸಿದರೆ ಕ್ರಮ ಜರುಗಿಸಬೇಕಾಗುತ್ತದೆ.
    | ಅರುಣ ಕಟಾಂಬಳೆ, ಜಿಪಂ ಉಪಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts