More

    ಮತ್ತೆ 312 ಜನರಿಗೆ ಸೋಂಕು

    ಬೆಳಗಾವಿ: ಗಡಿಜಿಲ್ಲೆಯಲ್ಲಿ ಶನಿವಾರ ಕರೊನಾ ಅಟ್ಟಹಾಸ ಮುಂದುವರಿದಿದ್ದು, ಸತತ ಎರಡನೇ ದಿನವೂ ತ್ರಿಶತಕ ದಾಟಿ ಬರೋಬ್ಬರಿ 312 ಜನರಲ್ಲಿ ಕೋವಿಡ್-19 ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ-5,174ಕ್ಕೆ ಏರಿಕೆಯಾಗಿದೆ.

    ಬೆಳಗಾವಿಯ 60 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 94 ಕ್ಕೇರಿದೆ. ಇದೇ ಮೊದಲಬಾರಿಗೆ ಜಿಲ್ಲೆಯಲ್ಲಿ ಒಂದೇ ದಿನ 378 ಜನ ಗುಣಮುಖರಾಗಿದ್ದಾರೆ. ಈವರೆಗೂ ಒಟ್ಟು 1,649 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

    ಶನಿವಾರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಬೆಳಗಾವಿ ನಗರ ಸೇರಿದಂತೆ ತಾಲೂಕಿನಲ್ಲಿ 131 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಗೋಕಾಕ-28, ಸವದತ್ತಿ-58, ಹುಕ್ಕೇರಿ-30, ಖಾನಾಪುರ-6, ರಾಮದುರ್ಗ-7, ಬೈಲಹೊಂಗಲ-24, ಚಿಕ್ಕೋಡಿ-21, ಅಥಣಿ-2, ರಾಯಬಾಗ ತಾಲೂಕಿನಲ್ಲಿ-4 ಜನರಿಗೆ ಸೋಂಕು ದೃಢಪಟ್ಟಿದೆ.

    3,431 ಸೋಂಕಿತರು ಬಿಮ್ಸ್ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನ ಲಕ್ಷಣಗಳಿರುವ 328 ಜನರ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ಬಾಕಿ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts