ಕರೊನಾ ಬುಲೆಟಿನ್​: ಸೋಂಕಿಗಿಂತಲೂ ಚೇತರಿಸಿಕೊಂಡು ಬಿಡುಗಡೆಗೊಂಡವರೇ ಅಧಿಕ

Corona
Published on

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,222 ಮಂದಿಗೆ ಕರೊನಾ ಸೋಂಕಿರುವುದು ಕೋವಿಡ್​-19 ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9,07,123ಕ್ಕೆ ತಲುಪಿದೆ. ಇನ್ನು ಗುಣಮುಖರ ಪೈಕಿ ಶುಕ್ರವಾರವೊಂದೇ ದಿನ 1,039 ಮಂದಿ ವಿವಿಧ ಕೋವಿಡ್​ ಕೇರ್ ಸೆಂಟರ್​ ಹಾಗೂ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಒಟ್ಟು ಪ್ರಮಾಣ 8,79,735 ಆಗಿದೆ.

ಅದಾಗ್ಯೂ ರಾಜ್ಯದಲ್ಲಿ 15,380 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 223 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶುಕ್ರವಾರ 8 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,989ಕ್ಕೆ ತಲುಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net