More

    ಹೊನ್ನಾಳಿ-ನ್ಯಾಮತಿಯಲ್ಲಿ 45 ಕೋವಿಡ್ ಪ್ರಕರಣ

    ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ತಾಲೂಕುಗಳಲ್ಲಿ ಕಳೆದೊಂದು ವಾರದಲ್ಲಿ 45 ಕರೋನಾ ಪ್ರಕರಣಗಳು ಕಂಡು ಬಂದಿವೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ ತಿಳಿಸಿದರು.
    ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, 20 ರೋಗಿಗಳು ಚೇತರಿಸಿಕೊಂಡಿದ್ದಾರೆ. 25 ಸಕ್ರಿಯ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದರು.
    ಎರಡೂ ತಾಲೂಕಿನಲ್ಲಿ ನಿತ್ಯ 75 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲು ತೀರ್ಮಾನಿಸಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಭವನದಲ್ಲಿ ಮಾದರಿ ಸಂಗ್ರಹಿಸಲಾಗುವುದು ಎಂದು ಹೇಳಿದರು.
    ಆಶಾ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತರು ಗ್ರಾಮಕ್ಕೆ ಬಂದಿರುವ ಹೊಸಬರನ್ನು ಕರೊನಾ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯಾಧಿಕಾರಿಗಳಿಗೆ ತಿಳಿಸಬೇಕು ಎಂದರು.
    ಕರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿತ್ತು. ಆದರೆ, ಇತ್ತೀಚೆಗೆ ಮತ್ತೆ ಹೆಚ್ಚಾಗುತ್ತಿದೆ. ತಾಲೂಕಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಒಗಳು ಪ್ರಚಾರ ಕೈಗೊಳ್ಳಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ತಿಳಿಸಿ ಕರೊನಾ ಬಗ್ಗೆ ಅರಿವು ಮೂಡಿಸಬೇಕು.
    ಹುಲ್ಲುಮನಿ ತಿಮ್ಮಣ್ಣ, ಉಪವಿಭಾಗಾಧಿಕಾರಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts