More

    ಕರೊನಾ ಸೋಂಕು ಪ್ರಕರಣದಲ್ಲಿ ಏರಿಕೆ; ಕೋವಿಡ್ ತಡೆಗೆ ಆರೋಗ್ಯ ಇಲಾಖೆಯಿಂದ ಪಂಚಸೂತ್ರ

    ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರದಿಂದ ಕೋವಿಡ್ ಸೋಂಕು ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಪರೀಕ್ಷೆ, ರೋಗ ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ಸೂಕ್ತ ನಡುವಳಿಕೆಯಂತಹ (ಸಿಎಬಿ) ಪಂಚ ಸೂತ್ರಗಳನ್ನು ಮುಂದುವರಿಸುವಂತೆ ಸೂಚಿಸಿದೆ.

    ಇದನ್ನೂ ಓದಿ: ಚುನಾವಣಾ ಆಯೋಗಕ್ಕೆ ವಿಶೇಷ ಮನವಿ: ಜಾರಿಯಾಗುತ್ತಾ ಹೊಸ ಸೂಚನೆ?

    ಉಸಿರಾಟದ ಸಮಸ್ಯೆ ಇರುವವರ ಮೇಲೆ ನಿಗಾವಹಿಸಬೇಕು. ಸೋಂಕಿನ ಲಕ್ಷಣಗಳಿದ್ದರೆ ಪರೀಕ್ಷೆಗೆ ಒಳಪಡಿಸಬೇಕೆಂದು ಸೂಚಿಸಲಾಗಿದೆ. ಉಸಿರಾಟದ ತೊಂದರೆ (ಸಾರಿ) ಶೀತಜ್ವರ (ಐಎಲ್‌ಐ) ಪ್ರಕರಣಗಳ ಮೇಲೆ ಪರಿಣಾಮಕಾರಿ ಮೇಲ್ವಿಚಾರಣೆ ಮಾಡಬೇಕು. ಇವುಗಳ ಜತೆ ಅಡೆನೊವೈರಸ್ ಮತ್ತು ಇನ್‌ಫ್ಲೂಯೆಂಜಾ ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ತಿಳಿಸಿದೆ.

    ಇದನ್ನೂ ಓದಿ: ಬಂಧನದ ಬೆನ್ನಿಗೇ ಮಾಡಾಳ್​ಗೆ ಎದೆನೋವು!; ‘ನಾನು ಹಾರ್ಟ್ ಪೇಷಂಟ್, ಎದೆನೋವು ಬರ್ತಿದೆ’ ಎನ್ನುತ್ತಿರುವ ಶಾಸಕ

    ಇನ್​ಫ್ಲೂಯೆಂಜಾ ಮತ್ತು ಕೋವಿಡ್ ಪ್ರಕರಣಗಳಿಗೆ ಅಗತ್ಯವಿರುವ ಔಷಧಗಳ ಲಭ್ಯತೆ, ರಾಜ್ಯಾದ್ಯಂತ ಸಾಕಷ್ಟು ಹಾಸಿಗೆಗಳು ಮತ್ತು ಮಾನವ ಸಂಪನ್ಮೂಲಗಳ ಲಭ್ಯತೆಯ ಜೊತೆಗೆ ಆರೋಗ್ಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು. ರೋಗಿಗಳು, ಆರೋಗ್ಯ ವೃತ್ತಿಪರರು ಆಸ್ಪತ್ರೆಗಳ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಹಿರಿಯ ನಾಗರಿಕರು ಮತ್ತು ಅನ್ಯ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಆಸ್ಪತ್ರೆಗಳಲ್ಲಿ ಕೋವಿಡ್‌ನ ಮುಂಜಾಗ್ರತಾ ಕ್ರಮವಾಗಿ ಅಣುಕು ಪ್ರದರ್ಶನ ನಡೆಸಬೇಕೆಂದು ಸೂಚಿಸಲಾಗಿದೆ.

    ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

    ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts