More

    ಕರೊನಾ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

    ಬೆಳಗಾವಿ: ಮಾರಕ ಕರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕ ಹಾಗೂ ಮಹಾನಗರ ಘಟಕಗಳಲ್ಲಿ ಪಕ್ಷದಿಂದ ಕೈಗೊಂಡಿದ್ದ ಸೇವಾ ಕಾರ್ಯ ಚಟುವಟಿಕೆಗಳು ಮತ್ತು ಕಾರ್ಯಕರ್ತರ ಜನಪರ ಸೇವೆಗಳನ್ನು
    ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶ್ಲಾಘಿಸಿದರು.

    ನಗರದ ಕಾಡಾ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕಾರ್ಯಕರ್ತರು ಜನರಲ್ಲಿ ಕರೊನಾ ವೈರಸ್ ನಿಯಂತ್ರಿಸುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು.

    ಮಾಸ್ಕ್ ಧಾರಣೆ, ದೈಹಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದರು. ವಿಭಾಗ ಪ್ರಭಾರಿ ಈರಣ್ಣ ಕಡಾಡಿ, ಮಾಜಿ ಶಾಸಕ, ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರು, ರೈತರ ಬೆಳೆಗೆ ಬೆಂಬಲ ಬೆಲೆ ಮತ್ತು ಅಸಂಘಟಿತ ಕಾರ್ಮಿಕರ ಕುರಿತಂತೆ ಸಭೆಯಲ್ಲಿ ಚರ್ಚಿಸಿದರು.

    ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿರೇಬಾಗೇವಾಡಿ ಸದ್ಯದ ಪರಿಸ್ಥಿತಿ ಕುರಿತಂತೆ ಕಾರ್ಯಕರ್ತರು ಗಮನಕ್ಕೆ ತಂದು ಕೆಲಕಾಲ ಚರ್ಚಿಸಿದರು.

    ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಅವರು ಪಕ್ಷದ ಸೇವಾ ಕಾರ್ಯಗಳ ಸಮಗ್ರ ವರದಿ ನೀಡಿದರು. ವಿಭಾಗ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ, ಮಹೇಶ ಮೋಹಿತೆ, ಸುಭಾಷ ಪಾಟೀಲ, ಮುರುೇಂದ್ರ ಪಾಟೀಲ, ಗಿರೀಶ ದೊಂಗಡಿ, ದಾದಾಗೌಡ ಬಿರಾದಾರ, ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts