ನಿಪ್ಪಾಣಿ: ಕರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಒಟ್ಟು ಮೂರು ಕಡೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಬೇರೆ ರಾಜ್ಯಗಳಿಂದ ಬರುವ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಕರ್ನಾಟಕ ರಾಜ್ಯದವರು ವಾಪಸ್ ಬರುತ್ತಿದ್ದಲ್ಲಿ ಅಂಥವರನ್ನು ಮಾತ್ರ ಪರೀಕ್ಷಿಸಿ, ಗುರುತಿನ ಚೀಟಿ ಪರಿಶೀಲಿಸಿ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆ. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ, ಕರೊನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬರದೇ ಇದ್ದಲ್ಲಿ ಅವರಿಗೆ ರಾಜ್ಯಕ್ಕೆ ಪ್ರವೇಶಿಸಲು ಬಿಡಲಾಗುತ್ತಿದೆ. ಬೇರೆಯವರನ್ನು ವಾಪಸ್ ಕಳುಹಿಸಲಾಗುತ್ತಿದೆ.
ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದಾರೆ. ವಿದೇಶದಿಂದ ಬಂದವರ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ ಎಂದು ತಹಸೀಲ್ದಾರ್ ಪ್ರಕಾಶ ಗಾಯಕವಾಡ ಮಾಹಿತಿ ನೀಡಿದ್ದಾರೆ.