More

    ಕರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಬಿಎಸ್‌ವೈ ಸೂಚನೆ

    ಕೊಪ್ಪಳ: ಕರೊನಾ ನಿಯಂತ್ರಣ ಜವಾಬ್ದಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಿದ್ದು, ಚೆನ್ನಾಗಿ ನಿಭಾಯಿಸಬೇಕೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

    ಕೋವಿಡ್ ನಿಯಂತ್ರಣ ಕುರಿತು ಗುರುವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಆಯಾ ಜಿಲ್ಲಾಧಿಕಾರಿಗಳಿಗೆ ಎಲ್ಲ ಅಧಿಕಾರ ನೀಡಿದ್ದು, ಯಾವುದೇ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆಯಾದರೆ ಅದಕ್ಕೆ ಜಿಲ್ಲಾಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು. ಬೆಳಗ್ಗೆ 6ರಿಂದ 10ವರೆಗೆ ಅಗತ್ಯ ವಸ್ತು ಕೊಳ್ಳಲು ಅವಕಾಶ ನೀಡಿದ್ದು, ಅನವಶ್ಯಕವಾಗಿ ಓಡಾಡುವುದನ್ನು ತಡೆಯಬೇಕು. ಕರೊನಾ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಿ. ಕೋವಿಡ್ 2ನೇ ಅಲೆ ತೀವ್ರವಾಗುತ್ತಿದ್ದು, ನಮ್ಮಲ್ಲಿರುವ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸಿ. ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಿ. ನರೇಗಾ ಯೋಜನೆಯನ್ವಯ ಹಳ್ಳಿಗಳಲ್ಲಿ ಜನರಿಗೆ ಉದ್ಯೋಗ ಕೊಡಿಸಿ ಎಂದು ಸೂಚಿಸಿದರು.

    ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಬೆಡ್‌ಗಳ ಕೊರತೆ ಇಲ್ಲ. ಮುಂಜಾಗ್ರತೆಯಾಗಿ 355 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ರೆಮ್‌ಡಿಸಿವಿರ್ ದಾಸ್ತಾನು ಸಾಕಷ್ಟಿದೆ. ಈಗಾಗಲೇ ಶೇ.52 ವ್ಯಾಕ್ಸಿನೇಷನ್ ಆಗಿದೆ. ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೋತ್ಸಾಹಿಸಲು ಖಾಸಗಿ ಶಾಲೆಗಳ 50 ಬಸ್ಸುಗಳನ್ನು ಹಳ್ಳಿಗಳಿಗೆ ತೆಗೆದುಕೊಂಡು ಹೋಗಿ ಲಸಿಕೆ ಹಾಕಲಾಗುತ್ತಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts