ಸಿಇಟಿಗೂ ಕರೊನಾ ಛಾಯೆ, ಈ ತಿಂಗಳು ಎಕ್ಸಾಂ ನಡೆಯೋದು ಡೌಟು

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದೂಡುವ ಸಾಧ್ಯತೆ ಹೆಚ್ಚಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚರ್ಚಿಸುತ್ತಿದೆ.

ರಾಜ್ಯದಲ್ಲಿ ಕರೊನಾ ಕಾಲಿಡುವ ಮೊದಲು ಸಿಇಟಿಯನ್ನು ಏಪ್ರಿಲ್​ ಮೂರನೇ ವಾರದಲ್ಲಿ ನಡೆಸಲು ವೇಳಾಪಟ್ಟಿ ಸಿದ್ಧವಾಗಿತ್ತು. ಆದರೆ, ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜುಲೈನಲ್ಲಿ ಪರೀಕ್ಷೆ ನಡೆಸಲು ಮರು ವೇಳಾಪಟ್ಟಿ ರೂಪಿಸಲಾಗಿತ್ತು. ಇದೀಗ ರಾಷ್ಟ್ರಮಟ್ಟದ ಪರೀಕ್ಷೆಗಳೇ ಮುಂದೂಡಿಕೆ ಆಗುತ್ತಿರುವುದರಿಂದ ಸಿಇಟಿಯನ್ನೂ ಮುಂದೂಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದನ್ನೂ ಓದಿರಿ ಕೋವಿಡ್​ಗೆ ಔಷಧ ಇದೆ, ಆತಂಕ ಪಡಬೇಡಿ: ಡಿಸಿಎಂ ಅಶ್ವಥನಾರಾಯಣ

2020ನೇ ಸಾಲಿನ ಸಿಇಟಿಗೆ 1.94 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬದಲಿ ಪರೀಕ್ಷಾ ಕೇಂದ್ರಕ್ಕೂ ಕೆಇಎ ಅವಕಾಶ ಕಲ್ಪಿಸಿತ್ತು. ಆ ಪ್ರಕಾರವಾಗಿ ರಾಜ್ಯದಲ್ಲಿ 26 ಸಾವಿರ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನು ಬದಲು ಮಾಡಿಕೊಂಡಿದ್ದರು. ಪರೀಕ್ಷೆ ನಡೆಸಲು ಕೆಇಎ ಸಕಲ ಸಿದ್ಧತೆಯನ್ನೂ ಮಾಡಿಕೊಂಡಿದೆ.

ಈ ಮಧ್ಯೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದವರು ಇತ್ತೀಚಿಗೆ ವರ್ಗಾವಣೆಗೊಂಡಿದ್ದಾರೆ. ಸದ್ಯ ಕೆಇಎ ಜವಾಬ್ದಾರಿಯನ್ನು ಪಿಯು ಇಲಾಖೆ ನಿರ್ದೇಶಕರಿಗೆ ವರ್ಗಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಇಎ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗಿದೆ. ಆದರೆ, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪರೀಕ್ಷೆ ಮುಂದೂಡುವ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೇ ಆದೇಶ ಹೊರ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ.

ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಜುಲೈ ಮೂರನೇ ವಾರದಲ್ಲಿ ನಡೆಯಬೇಕಿದ್ದ ನೀಟ್​ ಪರೀಕ್ಷೆಯನ್ನೂ ಸೆಪ್ಟೆಂಬರ್​ಗೆ ಮುಂದೂಡಲಾಗಿದೆ.

video/ ಬೆಂಗಳೂರು-ಮೈಸೂರಿನ ಜನರೇ, ಈ ಗ್ರಾಮಕ್ಕೆ ನೀವೇನಾದ್ರೂ ಕಾಲಿಟ್ಟರೆ 5 ಸಾವಿರ ರೂ. ದಂಡ ಕಟ್ಟಬೇಕು!

Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…