More

    ಕರೊನಾ ಹೋರಾಟಕ್ಕೆ ಕೆಎಲ್‌ಇ ಆಸ್ಪತ್ರೆ ಸಿದ್ಧ

    ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳಿಗಾಗಿಯೇ ಸುಮಾರು 40 ಹಾಸಿಗೆ ಮೀಸಲಿಡಲಾಗಿದೆ. 4 ಹಾಸಿಗೆಗಳು ವೆಂಟಿಲೇಟರ್ ಹೊಂದಿದ್ದು, ಚಿಕಿತ್ಸೆ ನೀಡಲು ಅಗತ್ಯ ವೈದ್ಯಕೀಯ ಸಲಕರಣೆಗಳ ಸೌಲಭ್ಯವಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದ್ದಾರೆ.ನಗರದ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಬುಧವಾರ ಕೋವಿಡ್- 19ನಿಂದ ಸಂಪೂರ್ಣ ಗುಣಮುಖ ರಾದ ಇಬ್ಬರನ್ನು ಪುಷ್ಪಗುಚ್ಛ ನೀಡಿ ಆಸ್ಪತ್ರೆಯಿಂದ ಬೀಳ್ಕೊಟ್ಟು ಮಾತನಾಡಿದ ಅವರು, ಮಹಾಮಾರಿ ಕೋವಿಡ್-19 ಎದುರಿಸಲು ಮೂರು ತಿಂಗಳ ಹಿಂದೆಯೇ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕರೊನಾ ಸೋಂಕು ಎದುರಿಸಲು ನಾವು ಸರ್ಕಾರದೊಂದಿಗೆ ಕೈಜೋಡಿಸಿದ್ದೇವೆ ಎಂದು ಮಾಹಿತಿ ನೀಡಿದರು.

    ಅಥಣಿ ಮೂಲದ 70 ಹಾಗೂ 30 ವರ್ಷ ವಯಸ್ಸಿನ ಇಬ್ಬರು ರೋಗಿಗಳಿಗೆ 7 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅವರು ಕರೊನಾ ವೈರಸ್‌ನಿಂದ ಸಂಪೂರ್ಣ ಗುಣಮುಖರಾಗಿ ಬುಧವಾರ ಬಿಡುಗಡೆಯಾಗಿದ್ದಾರೆ. ಕೋವಿಡ್-19 ನಿವಾರಣೆಗೆ ಯಾವುದೇ ನ್ಯೂನತೆ ಎದುರಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 8 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ ಇಬ್ಬರು ಬುಧವಾರ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಎಲ್ಲರೂ ಗುಣಮುಖರಾಗಲಿ ಎಂದು ಆಶಿಸಿದರು.

    ಕೋವಿಡ್-19 ವಾರ್ ರೂಂಗೆ ಡಾ.ಪ್ರಭಾಕರ ಕೋರೆ ಚಾಲನೆ ನೀಡಿದರು. ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಎಸ್. ಮಹಾಂತಶೆಟ್ಟಿ, ಡಾ. ವಿ.ಡಿ. ಪಾಟೀಲ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಆರ್.ಎಸ್. ಮುಧೋಳ, ಡಾ. ಎ.ಎಸ್. ಗೋಗಟೆ, ಡಾ.ಮಾಧವಪ್ರಭು , ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts