

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,217 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,947ಕ್ಕೆ ಏರಿಕೆಯಾಗಿದೆ. ಹಾಗೇ ಒಂದೇ ದಿನದಲ್ಲಿ 7,021 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 129 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 3,22,454. ಮೃತರಾದವರು 6937 ಮಂದಿ ಹಾಗೂ ಒಟ್ಟು ಸಕ್ರಿಯ ಪ್ರಕರಣಗಳು 1,01,537. ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 768 ಸೋಂಕಿತರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಚಪ್ಪಲಿಗಳಿಗೆ ಫ್ರೇಮ್ ಹಾಕಿಸಿ ಅರ್ನಬ್ ಗೋಸ್ವಾಮಿ ಆಫೀಸ್ಗೆ ತೆಗೆದುಕೊಂಡು ಹೋದ ಅನುರಾಗ್ ಕಶ್ಯಪ್
ಬೆಂಗಳೂರಿನಲ್ಲಿಯೇ ಸೋಂಕಿತರ ಸಂಖ್ಯೆ ಲಕ್ಷದ ಗಡಿ ದಾಟಿದ್ದು, 1,60,205ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 43656. ಇಂದು ಒಂದೇ ದಿನ ಇಲ್ಲಿ 33 ಮಂದಿ ಕರೊನಾಕ್ಕೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 2340ಕ್ಕೆ ಏರಿದೆ.