More

    ಕರೊನಾದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆಲ್ತ್‌ ರಿಪೋರ್ಟರ್‌!

    ನವದೆಹಲಿ: ಕರೊನಾ ಸೋಂಕಿನಿಂದ ಬಳಲುತ್ತಿದ್ದ ಇಲ್ಲಿಯ ಯುವ ಪತ್ರಕರ್ತನೋರ್ವ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    34 ವರ್ಷದ ಯುವಕ, ಇಲ್ಲಿಯ ಹಿಂದಿ ಪತ್ರಿಕೆಯೊಂದರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ವರದಿಗಾರಿಕೆ ಮಾಡುತ್ತಿದ್ದರು. ಇವರನ್ನು ಇಲ್ಲಿಯ ದೆಹಲಿಯ ಏಮ್ಸ್ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಇದನ್ನೂ ಓದಿ: ಕರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ

    ಕಳೆದ ಕೆಲವು ದಿನಗಳಿಂದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಏಕಾಏಕಿಯಾಗಿ ನಾಲ್ಕನೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇವರು ಕೆಲ ವರ್ಷಗಳಿಂದ ಸ್ಥಳೀಯ ಹಿಂದಿ ಪತ್ರಿಕೆಯೊಂದರಲ್ಲಿ ಹೆಲ್ತ್‌ ರಿಪೋರ್ಟರ್‌ ಆಗಿ ಕೆಲಸ ನಿರ್ವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

    ಏತನ್ಮಧ್ಯೆ, ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಆದರೆ ಇದಾಗಲೇ 72 ಸಾವಿರಕ್ಕಿಂತಲೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. ಆದ್ದರಿಂದ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಮದುಮಕ್ಕಳಿಗೆ ಭಾರಿ ಶಾಕ್‌- ಸಾರ್ವಜನಿಕ ಮದುವೆ ಬ್ಯಾನ್‌- ಎಲ್ಲೆಲ್ಲಿ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts