More

    ಕರೊನಾ ತಡೆಗೆ ಮುನ್ನೆಚ್ಚರಿಕೆ ವಹಿಸಿ

    ಅಥಣಿ: ಮಹಾಮಾರಿ ಕರೊನಾ ವೈರಸ್ ತಡೆಗಟ್ಟಲು ತಾಲೂಕಾಡಳಿತ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ತುರ್ತು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರೊನಾ ವೈರಸ್ ನಿಯಂತ್ರಣಕ್ಕೆ ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಪೌರ ಕಾರ್ಮಿಕರು ಹೆಚ್ಚಿನ ನಿಗಾ ವಹಿಸಿ ಕಾರ್ಯ ನಿರ್ವಹಿಸಬೇಕು. ಜನರಿಗೆ ದಿನಸಿ, ಔಷಧ ವಿತರಣೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಶಾಸಕ ಮಹೇಶ ಕುಮಠಳ್ಳಿ, ಉಪ ತಹಸೀಲ್ದಾರ್ ರಾಜು ಬುರ್ಲಿ, ಸಿಪಿಐ ಶಂಕರಗೌಡ ಬಸನಗೌಡರ, ವೈದ್ಯಾಧಿಕಾರಿ ಸಿ.ಎಸ್.ಪಾಟೀಲ, ವೀರಣ್ಣಾ ವಾಲಿ, ಎಂ.ಎಸ್. ಕವಲಾಪುರ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಕಿರಾಣಿ ಅಂಗಡಿಗಳ ಸಮಯದಲ್ಲಿ ಬದಲಾವಣೆ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬೆಳಗ್ಗೆ 7ರಿಂದ 9ರ ವರೆಗೆ ಪಾಸ್ ನೀಡಿರುವ ಅಂಗಡಿಗಳಲ್ಲಿ ಮಾತ್ರ ಜನರಿಗೆ ಸೇವೆ ಲಭ್ಯವಿದೆ. ಈ ನಿಯಮ ಏ. 7ರಿಂದ ಅನ್ವಯವಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಎಸ್. ಕವಲಾಪುರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts