More

    ಕರೊನಾ ಪ್ರಯೋಗಾಲಯ ಶೀಘ್ರ ಆರಂಭಿಸಿ

    ಬೆಳಗಾವಿ: ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕರೊನಾ ವೈರಸ್ ಪರೀಕ್ಷೆ ಪ್ರಯೋಗಾಲಯದ ಆವರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹಾಗೂ ಕೇಂದ್ರ ಸಚಿವ ಸುರೇಶ ಅಂಗಡಿ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು. ಅಲ್ಲದೆ, ಅಗತ್ಯ ಸಾಮಗ್ರಿ ಮತ್ತು ಕಿಟ್ ತರಿಸಿಕೊಂಡು ತಕ್ಷಣವೇ ಪ್ರಯೋಗಾಲಯ ಆರಂಭಿಸುವಂತೆ ಸೂಚಿಸಿದರು.

    ಇಲ್ಲಿನ ಕೆಎಲ್‌ಇ ಆಸ್ಪತ್ರೆ ಎದುರಿಗಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಐಸಿಎಂಆರ್) ಆವರಣದಲ್ಲಿ ಪ್ರಯೋಗಾಲಯ ಆರಂಭಕ್ಕೆ ಅನುಮತಿ ದೊರೆತಿದೆ.

    ಈ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ಕುರಿತು ಸಂಸ್ಥೆಯ ನಿರ್ದೇಶಕರ ಜತೆ ಸಚಿವರು ಚರ್ಚಿಸಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಮಾತನಾಡಿ, ಪ್ರಯೋಗಾಲಯ ಆರಂಭಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಎಲ್ಲ ನೆರವು ನೀಡಲಾಗಿದೆ. ಹೆಚ್ಚಿನ ನೆರವು ಅಗತ್ಯವಿದ್ದರೆ ಕೂಡಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಡಿಸಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ., ಐಸಿಎಂಆರ್ ನಿರ್ದೇಶಕ ಡಾ. ದೇವಪ್ರಸಾದ ಚಟ್ಟೋಪಾಧ್ಯಾಯ ಇತರರಿದ್ದರು. ಅಲ್ಲದೆ, ಅಗತ್ಯ ಸಾಮಗ್ರಿ ಮತ್ತು ಕಿಟ್ ತರಿಸಿಕೊಂಡು ತಕ್ಷಣವೇ ಪ್ರಯೋಗಾಲಯ ಆರಂಭಿಸುವಂತೆ ಸೂಚಿಸಿದರು.

    ಇಲ್ಲಿನ ಕೆಎಲ್‌ಇ ಆಸ್ಪತ್ರೆ ಎದುರಿಗಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ (ಐಸಿಎಂಆರ್) ಆವರಣದಲ್ಲಿ ಪ್ರಯೋಗಾಲಯ ಆರಂಭಕ್ಕೆ ಅನುಮತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆ ಕುರಿತು ಸಂಸ್ಥೆಯ ನಿರ್ದೇಶಕರ ಜತೆ ಸಚಿವರು ಚರ್ಚಿಸಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಮಾತನಾಡಿ, ಪ್ರಯೋಗಾಲಯ ಆರಂಭಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಎಲ್ಲ ನೆರವು ನೀಡಲಾಗಿದೆ.

    ಹೆಚ್ಚಿನ ನೆರವು ಅಗತ್ಯವಿದ್ದರೆ ಕೂಡಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಡಿಸಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ., ಐಸಿಎಂಆರ್ ನಿರ್ದೇಶಕ ಡಾ. ದೇವಪ್ರಸಾದ ಚಟ್ಟೋಪಾಧ್ಯಾಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts