More

    ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕರೊನಾ ಪಾಠ: ಶಿಕ್ಷಣ ಇಲಾಖೆ ನಿರ್ಧಾರ

    ಬೆಂಗಳೂರು: ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿರುವ ಕರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಸಲು ಕಿರು ಪಠ್ಯ ರಚಿಸಿ ವಿತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

    ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಕರೊನಾ ಕುರಿತಂತೆ ಆಯಾ ವಯೋಮಾನದ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗುವ ರೀತಿಯಲ್ಲಿ ಕಿರುಪಠ್ಯ ರಚನೆ ಮಾಡಿ ಶಾಲೆಗಳಿಗೆ ಪೂರೈಸುವುದರ ಜತೆಗೆ ಶಿಕ್ಷಕರ ತರಬೇತಿ ನೀಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಗುರುವಾರ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ ಕಿರುಕುಳ ನೀಡದೆ ತೆರಿಗೆ ಸೋರಿಕೆ ತಡೆಗಟ್ಟಿ: ಅಧಿಕಾರಿಗಳಿಗೆ ಸಿಎಂ ತಾಕೀತು

    ಇದು ಪಠ್ಯಕ್ರಮದ ಒಂದು ಭಾಗವಾಗಿ ಕಡ್ಡಾಯವಾಗಿ ಕಲಿಯಬೇಕಾದ ವಿಷಯವಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಅಂತೆಯೇ ಸಾಮಾಜಿಕ ಅಂತರ ನಮ್ಮ ಬದುಕಿನ ಸಹಜ ರೀತಿಯಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಅಂತರವನ್ನು ಕಾಯ್ದುಕೊಳ್ಳುವ ರೀತಿಯ ಕಲಿಕಾ ವಾತಾವರಣ ಕಲ್ಪಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯದ್ದಾಗಿದ್ದು, ಪರ್ಯಾಯ ಮಾರ್ಗಗಳ ಕುರಿತಂತೆ ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲೂ ಸಚಿವರು ಸೂಚಿಸಿದ್ದಾರೆ.

    ವಿದೇಶದಿಂದ ಬರುವ ಕನ್ನಡಿಗರಿಗಾಗಿ ಕೆಂಪೇಗೌಡ ವಿಮಾನ ನಿಲ್ದಾಣ ರೆಡಿ: ಸುಧಾಕರ್, ಬೊಮ್ಮಾಯಿ ಪರಿಶೀಲನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts