More

    ಕರೊನಾ ಲಾಕ್‌ಡೌನ್‌ಗೆ ಬೆಳಗಾವಿ ಜಿಲ್ಲಾದ್ಯಂತ ನಿಶ್ಯಬ್ದ !

    ಬೆಳಗಾವಿ: ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಮಂಗಳವಾರ ಪೊಲೀಸರು ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಸಂಚಾರ ಹಾಗೂ ವ್ಯಾಪಾರ-ವಹಿವಾಟು ಬಂದ್ ಮಾಡಿದರು.

    ದಿನದಿಂದ ದಿನಕ್ಕೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್‌ಡೌನ್ ಘೋಷಿಸಿದೆ. ಪೊಲೀಸರು ಮಂಗಳವಾರ ಬೆಳಗ್ಗೆಯಿಂದಲೇ ದ್ವಿಚಕ್ರ ವಾಹನ ಮತ್ತು ಕಾರ್ ಸೇರಿ ಯಾವುದೇ ವಾಹನಗಳು ಸಂಚರಿಸದಂತೆ ಕ್ರಮ ಕೈಗೊಂಡರು. ಬೆಳಗಾವಿ ನಗರ ಹಾಗೂ ವಿವಿಧ ತಾಲೂಕುಗಳಲ್ಲಿ ಅನಗತ್ಯವಾಗಿ ಬೈಕ್‌ನಲ್ಲಿ ಓಡಾಡುತ್ತಿರುವವರ ಮೇಲೆ ಲಾಠಿ ಬೀಸಿದರು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮನವಿಗೆ ಸ್ಪಂದಿಸದ ಕೆಲ ಜನರು ಸ್ವಯಂ ಪ್ರೇರಿತರಾಗಿ ಮನೆಯಿಂದ ಹೊರಗೆ ಬರಲಿಲ್ಲ. ಆಸ್ಪತ್ರೆಗೆ, ಆಹಾರ ಪದಾರ್ಥ ತೆಗೆದುಕೊಂಡು ಹೋಗುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಎಟಿಎಂಗಳು ಎಂದಿನಂತೆ ತೆರೆದಿದ್ದವು. ಹಳ್ಳಿಗಳಲ್ಲಿ ಪೊಲೀಸರು, ಪಿಡಿಒಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸಿದರು.

    ವಾಹನ ಸಂಚಾರ ಸ್ಥಗಿತ: ಕರೊನಾ ಭೀತಿಯಿಂದ ಪೊಲೀಸರು ಸರಕು ಸಾಗಣೆ ವಾಹನ ಹೊರತುಪಡಿಸಿ ವಿವಿಧ ಜಿಲ್ಲೆ, ನೆರೆಯ ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದ ವಾಹನಗಳನ್ನು ಚೆಕ್‌ಪೋಸ್ಟ್ ನಲ್ಲಿ ತಡೆದು ವಾಪಸ್ ಕಳುಹಿಸಿದರು. ಕೆಲ ವಾಹನಗಳಿಗೆ ಬೇರೆ ಕಡೆ ಹೋಗಲು ಅವಕಾಶ ನೀಡಲಿಲ್ಲ. ಇದರಿಂದ ವಾಹನಗಳು ರಸ್ತೆಯಲ್ಲೇ ಗಂಟೆಗಟ್ಟಲೆ ನಿಂತು ಬಳಿಕ ವಾಪಸ್ ಹೋದವು. ಇಬ್ಬರಿಗಿಂತ ಹೆಚ್ಚು ಜನರನ್ನು ಹೊತ್ತು ತಂದ ಸರಕು ಸಾಗಣೆ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡರು.

    ಲಾಕ್‌ಡೌನ್‌ಗೆ ಸಹಕಾರ ನೀಡಿ: ಕರೊನಾ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್ ಮಾಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ತುರ್ತು ಕೆಲಸ ಹಾಗೂ ಆಸ್ಪತ್ರೆಗಳಿಗೆ ಹೋಗುವವರು ಮಾತ್ರ ಮನೆಯಿಂದ ಹೊರಗಡೆ ಬನ್ನಿ. ದೇಶ, ವಿದೇಶದಿಂದ ಜಿಲ್ಲೆಗೆ ಆಗಮಿಸುವವರನ್ನು ಪತ್ತೆ ಹೆಚ್ಚಲಾಗುತ್ತಿದೆ ಎಂದು ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

    ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಕರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹಾಗಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ನಿಲ್ಲಿಸಬೇಕು. ಸರಕು-ಸಾಗಣೆ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
    | ಯಶೋದಾ ವಂಟಗೋಡಿ ಡಿಸಿಪಿ ಬೆಳಗಾವಿ

    ಬೆಳಗಾವಿ ಜಿಲ್ಲೆಯ ಜನರು ಲಾಕ್‌ಡೌನ್‌ಗೆ ಸಹಕಾರ ನೀಡುತ್ತಿದ್ದಾರೆ. ವಾಹನ ಸಂಚಾರ ಹಾಗೂ ಜನದಟ್ಟಣೆ ಸಂಪೂರ್ಣ ಕಡಿಮೆಯಾಗಿದೆ. ಜಿಲ್ಲೆಯ ಗಡಿಭಾಗದಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ.
    | ಲಕ್ಷ್ಮಣ ನಿಂಬರಗಿ ಎಸ್‌ಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts