More

    ಕರೊನಾಗೆ ವಿಧಾನಸೌಧ ಭದ್ರತಾ ವಿಭಾಗದ ಎಎಸ್​ಐ ಬಲಿ

    ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯೊಬ್ಬರು ಕರೊನಾಗೆ ಬಲಿಯಾಗಿದ್ದಾರೆ.

    ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ 58 ವರ್ಷದ ಎಎಸ್​ಐ ಅವರಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಎಎಸ್​ಐ ಸೋಮವಾರ ಮೃತಪಟ್ಟಿದ್ದಾರೆ. ಇದನ್ನೂ ಓದಿರಿ ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

    ನಗರ ಪೊಲೀಸ್​ ಆಯುಕ್ತರ ಆದೇಶದ ಮೇರೆಗೆ 50 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸಲಾಗಿತ್ತು. ರಜೆಯಲ್ಲಿದ್ದ ಎಎಸ್​ಐಗೆ ಮೂರ್ನಾಲ್ಕು ದಿನಗಳ ಹಿಂದೆ ಶೀತ, ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಕರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್​ ಎಂಬುದು ಗೊತ್ತಾಗಿತ್ತು.

    ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರು ಎಳೆದಿದ್ದಾರೆ ಎಂದು ವಿಧಾನಸೌಧ ಭದ್ರತಾ ವಿಭಾಗ ಡಿಸಿಪಿ ತಿಳಿಸಿದ್ದಾರೆ.

    ನಗರದಲ್ಲಿ ಈವರೆಗೆ 210 ಮಂದಿ ಪೊಲೀಸರಿಗೆ ಸೋಂಕು ತಗುಲಿದ್ದು, 69 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 136 ಪೊಲೀಸರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಎಎಸ್​ಐ, ಒಬ್ಬರು ಮುಖ್ಯಪೇದೆ ಸೋಂಕಿಗೆ ಬಲಿಯಾಗಿದ್ದಾರೆ.

    ಕೋವಿಡ್​ಗೆ ಔಷಧ ಇದೆ, ಆತಂಕ ಪಡಬೇಡಿ: ಡಿಸಿಎಂ ಅಶ್ವಥನಾರಾಯಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts