ದಿನೇಶ್ ಗುಂಡೂರಾವ್​ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ

Dinesh Gundurao 5 March 20
Published on

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.

ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್​ ಗುಂಡೂರಾವ್​, 'ನನಗೆ ಕೋವಿಡ್​ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್​ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು' ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿರಿ ಉಮಾ ಭಾರತಿಗೆ ಕರೊನಾ ಪಾಸಿಟಿವ್: ಟ್ವೀಟರ್​ನಲ್ಲಿ ಮಾಹಿತಿ

ದಿನೇಶ್ ಗುಂಡೂರಾವ್​ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು, ಹಾಗಾಗಿ ಸಹಜವಾಗಿಯೇ ಇವರ ಸಂಪರ್ಕಕ್ಕೆ ಬಂದವರಲ್ಲಿ ಕರೊನಾ ಭೀತಿ ಆವರಿಸಿದೆ.

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕರೊನಾ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಸುತ್ತಿದೆ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಸಾವು-ನೋವನ್ನು ತಂದೊಡ್ಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net