More

    ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೆ ಕರೊನಾ!

    ರಾಮನಗರ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ.

    ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಿ ಎನ್ನುವ ಸಲಹೆ ನೀಡಿದ್ದಾರೆ. ಇದನ್ನೂ ಓದಿರಿ ಈ ಮದುವೆಗೆ ಹೋಗಿದ್ದ 20ಕ್ಕೂ ಹೆಚ್ಚು ಜನರಿಗೆ ಕರೊನಾ ಪಾಸಿಟಿವ್​!

    ‘ಕಳೆದ ನಾಲ್ಕು ದಿನಗಳಿಂದ ಜ್ವರ ಇತ್ತು. ಹಾಗಾಗಿ ಕ್ವಾರಂಟೈನ್​ನಲ್ಲಿ ಇದ್ದೆ. ಗುರುವಾರ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ನಿನ್ನೆಯೇ(ಶುಕ್ರವಾರ) ಕೋವಿಡ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ’ ಎಂದು ಪುಟ್ಟಣ್ಣ ಅವರು ಪೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

    ನಂಟು ಎಲ್ಲಿಯದು?: ಮಾಜಿ ಶಾಸಕ ಎಚ್​.ಸಿ.ಬಾಲಕೃಷ್ಣ ಪುತ್ರಿಗೆ ಸೋಂಕು ಪತ್ತೆಯಾಗುವ ಎರಡ್ಮೂರು ದಿನ ಮೊದಲು ಎಲ್ಲರೂ ಒಂದೆಡೆ ಸೇರಿ ಊಟ ಮಾಡಿದ್ದರು ಎನ್ನಲಾಗಿದೆ.

    ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts