ರಮೇಶ್​ ಜಾರಕಿಹೊಳಿಗೆ ಕರೊನಾ ಪಾಸಿಟಿವ್​, ಕಾಂಗ್ರೆಸ್​ ಕಿಡಿ

Ramesh Jarakiholi vvani
Ramesh Jarakiholi
Published on

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕರೊನಾ ಪಾಸಿಟಿವ್ ಬಂದಿದೆ ಎಂದು ಸಚಿವ ಭೈರತಿ ಬಸವರಾಜ್​ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭೈರತಿ ಬಸವರಾಜ್​, ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲೇ ಇದ್ದಾರೆ. ಇನ್ನೆರಡು ದಿನದಲ್ಲಿ ಬೆಳಗಾವಿ ಲೋಕಸಭೆ ಉಪಚುನಾವಣಾ ಪ್ರಚಾರಕ್ಕೆ ಬಾಲಚಂದ್ರ ಜಾರಕಿಹೊಳಿ‌ ಬರ್ತಾರೆ. ರಮೇಶ್​ ಚೇತರಿಕೆ ಬಳಿಕ ಚುನಾವಣಾ ಪ್ರಚಾರಕ್ಕೆ ಬರೋದಾಗಿ ಹೇಳಿದ್ದಾರೆ. ರಮೇಶ್ ಮತ್ತು ಬಾಲಚಂದ್ರ ಜತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದರು. ಇತ್ತ ಸಿಡಿ ಕೇಸ್​ನ ಯುವತಿ ನ್ಯಾಯಾಧೀಶರ ಮುಂದೆ ಹಾಜರ್​ ಆಗಿ ಒಂದು ವಾರ ಆಗಿದೆ. ಅಂದಿನಿಂದ ರಮೇಶ್​ ನಾಪತ್ತೆಯಾಗಿದ್ದು, ಅವರು ಎಲ್ಲಿ ಹೋದರು ಎಂಬ ಪ್ರಶ್ನೆ ಸಾರ್ವಜನಿಕವಾಗಿ ಮೂಡಿತ್ತು.

ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಟ್ವೀಟ್​ ಮೂಲಕ ಕಿಡಿಕಾರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net