ಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕರೊನಾ ಸೋಂಕು

sharath bachegowda
Published on

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಅವರಿಗೂ ಕರೊನಾ ಸೋಂಕು ತಗುಲಿದೆ.

ಶಾಸಕರಿಗೆ ಮೊನ್ನೆ(ಸೋಮವಾರ) ಮೈಕೈ ನೋವು ಕಾಣಿಸಿಕೊಂಡಿದ್ದು, ಕರೊನಾ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬಂದ ವರದಿಯಲ್ಲಿ ಪಾಸಿಟಿವ್​ ಬಂದಿದೆ. ಸೋಂಕು ದೃಢಪಡುತ್ತಿದ್ದಂತೆ ಸ್ವತಃ ಶರತ್​ ಬಚ್ಚೇಗೌಡರೇ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ.

'ಜುಲೈ 6ರಂದು ನನಗೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದೆ. ಹಾಗಾಗಿ ಕೋವಿಡ್ ಪರೀಕ್ಷೆಗೆ ನಾನು ಮತ್ತು ನನ್ನ ಪತ್ನಿ ಒಳಗಾಗಿದ್ದೆವು. ಇಂದು(ಬುಧವಾರ) ಸಂಜೆ ಇಬ್ಬರಿಗೂ ಕರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆ ಪಡೆದು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಟ್ಟಿದ್ದೀವಿ' ಎಂದು ಶರತ್​ ಬಚ್ಚೇಗೌಡ ಹೇಳಿದ್ದಾರೆ.

'ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್​ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ' ಎಂದು ಶಾಸಕರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net