More

    ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಂಡ್ಯದಲ್ಲಿ ಶುರುವಾಯ್ತು ಟೆನ್ಶನ್!

    ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಜಿಲ್ಲೆಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಮತ್ತು ಮಾಧ್ಯಮದವರಿಗೆ ಢವಢವ ಶುರುವಾಗಿದೆ.

    ಜು.31 ಮತ್ತು ಆ.1ರಂದು ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರು. 31ರಂದು ಶ್ರೀರಂಗಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ್ದರು. ಬಳಿಕ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಚ್‌.ಬಿ.ರಾಮು ಸೇರಿದಂತೆ ಹಲವು ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ್ದರು. ಜತೆಗೆ ಪ್ರವಾಸಿಮಂದಿರದಲ್ಲಿಯೇ ಊಟ ಮುಗಿಸಿ ತೆರಳಿದ್ದರು. ಮರುದಿನ ಮತ್ತೆ ಶ್ರೀರಂಗಪಟ್ಟಣದ ಕಾಂಗ್ರೆಸ್ ಮುಖಂಡರೊಬ್ಬರ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಸುಮಾರು ಒಂದೂವರೆ ಗಂಟೆ ಕಾಲ ಕಳೆದಿದ್ದರು. ಈ ವೇಳೆ ಹಲವು ಮುಖಂಡರು ಇವರನ್ನು ಭೇಟಿ ಮಾಡಿದ್ದರು.

    ಇದನ್ನೂ ಓದಿರಿ ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಸ್ಥಿರ: ವೈದ್ಯರು ಹೇಳಿದ್ದೇನು?

    ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಟ್ರಾವೆಲ್​ ಹಿಸ್ಟರಿ ಮಂಡ್ಯ ಜಿಲ್ಲೆಯ ಕಾಂಗ್ರೆಸ್​ ನಾಯಕರಲ್ಲಿ ಆತಂಕ ಮೂಡಿಸಿದ್ದು, ಸೋಂಕಿನ ಭೀತಿ ಆವರಿಸಿದೆ. ಅಂತೆಯೇ, ಮುನ್ನೆಚ್ಚರಿಕೆಯ ಕ್ರಮವಾಗಿ ಎಲ್ಲರೂ ಹೋಂ ಕ್ವಾರಂಟೈನ್‌ನಲ್ಲಿದ್ದು, ಟೆಸ್ಟ್ ಮಾಡಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.

    ನಿನ್ನೆ(ಸೋಮವಾರ) ಬೆಳಗ್ಗೆಯಿಂದ ನನ್ನ ತಂದೆ ಸಿದ್ದರಾಮಯ್ಯ ಅವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕರೊನಾ ಪರೀಕ್ಷೆ ಮಾಡಲಾಗಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್​ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    ಆಸ್ಪತ್ರೆಯಲ್ಲಿ ಕಾಲ ಕಳೆಯೋದು ಕಷ್ಟ ಎಂದು ಸಿಎಂ ಯಡಿಯೂರಪ್ಪ ಏನ್​ ಮಾಡಿದ್ರು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts