ಕರೊನಾ ಸೋಂಕು; ರಂಭಾಪುರಿ ಜಗದ್ಗುರುಗಳು ಆಸ್ಪತ್ರೆಗೆ ದಾಖಲು

State 3 Rambhapuri Jagadguru
Published on

ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಪಟ್ಟಣದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಮಂಗಳವಾರ ಕರೊನಾ ಪಾಸಿಟಿವ್​ ಇರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಜ್ವರ ವಾಸಿಯಾಗಿದ್ದು, ಕರೊನಾದ ಬೇರಾವ ಲಕ್ಷಣಗಳೂ ಇಲ್ಲ. ಆದರೂ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಜಗದ್ಗುರುಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net