ಪ್ರಧಾನಿ ಮೋದಿ ತಾಯಿ ಹೀರಾಬೆನ್​ರಿಂದ ಕರೊನಾ ಪೀಡಿತರ ನೆರವಿಗೆ 25 ಸಾವಿರ ರೂ. ದೇಣಿಗೆ

heera ben 31 mar 20
Published on

ಗಾಂಧಿನಗರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಕರೊನಾ ಪೀಡಿತರ ನೆರವಿಗೆ ಧಾವಿಸಿದ್ದಾರೆ.

ಇದಕ್ಕಾಗಿ ತಾವು ಉಳಿಸಿದ 25 ಸಾವಿರ ರೂಪಾಯಿಯನ್ನು PM-Cares (ಪಿಎಂ ಕೇರ್ಸ್) ಪರಿಹಾರ ನಿಧಿಗೆ ನೀಡಿದ್ದಾರೆ.

ಕರೊನಾ ಸೋಂಕು ದೇಶದಲ್ಲಿ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರು ಉದಾರವಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದರು. ಪ್ರಧಾನಮಂತ್ರಿ ಅವರ ಪರಿಹಾರ ನಿಧಿಗೆ ಪಾವತಿಸುವಂತೆ ಅವರು ಕೋರಿದ್ದರು.

ನೆರವಿಗೆ ಸ್ಪಂದಿಸಿದ ಭಾರತೀಯರು ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಉದ್ಯಮಿಗಳು, ಕ್ರೀಡಾಪಟುಗಳು, ನಟರು ಹಾಗೂ ಸಾರ್ವಜನಿಕರು ದೇಣಿಗೆ ನೀಡುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಅವರು 25 ಸಾವಿರ ರೂಪಾಯಿ ನೀಡಿ ಕರೊನಾ ವೈರಸ್​ ವಿರುದ್ಧ ಹೋರಾಟಕ್ಕೆ ಕೈಜೋಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net