More

    ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳ ಶುಲ್ಕ ಮನ್ನಾ ಮಾಡಲು ಒತ್ತಾಯ

    ಕೊಪ್ಪಳ: ಕರೊನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದ್ದು, ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಶುಲ್ಕ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಎಸ್‌ಪಿ ಜಿಲ್ಲಾ ಪದಾಧಿಕಾರಿಗಳು ಬುಧವಾರ ಎಡಿಸಿ ಎಂ.ಪಿ.ಮಾರುತಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಕರೊನಾದಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಕೋಟ್ಯಂತರ ಜನರು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಜೀವನ ನಡೆಸುವುದೇ ಕಷ್ಟವಾಗಿದೆ. ಅದರಲ್ಲೂ ಶಾಲಾ-ಕಾಲೇಜುಗಳು ಆರಂಭವಾಗುವ ಲಕ್ಷಣಗಳಿಲ್ಲ. ಆದರೂ, ಖಾಸಗಿ ಶಾಲೆಯವರು ಶುಲ್ಕ ತುಂಬಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ವರ್ಷ ಎಲ್ಲ ವಿಧದ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಪೋಷಕರಿಗೆ ಹೆಚ್ಚಿನ ಹೊರೆ ತಗ್ಗಿಸಬೇಕು. ಈಗಾಗಲೇ ಕಟ್ಟಿಸಿಕೊಂಡಿರುವ ಶುಲ್ಕವನ್ನು ಮರುಪಾವತಿ ಮಾಡಬೇಕು ಎಂದು ಒತ್ತಾಯಿಸಿದರು. ಬಿಎಸ್‌ಪಿ ರಾಜ್ಯ ಕಾರ್ಯದರ್ಶಿಗಳಾದ ಶಿವಪುತ್ರಪ್ಪ ಗುಮಗೇರಿ, ಎಂ.ಕೆ.ಜಗ್ಗೇಶ, ಜಿಲ್ಲಾಧ್ಯಕ್ಷ ಹುಲಿಗೇಶ ದೇವರಮನಿ, ಉಪಾಧ್ಯಕ್ಷ ಚೆನ್ನಪ್ಪ ನಾಯಕ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಈಳಿಗನೂರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts