More

    ಕರೊನಾ ಸೇನಾನಿಗಳ ಕಾರ್ಯ ಶ್ಲಾಘನೀಯ

    ಮಾಂಜರಿ: ವಿಶ್ವವನ್ನೇ ಕಾಡುತ್ತಿರುವ ಮಹಾಮಾರಿ ಕರೊನಾ ವೈರಸ್ ನಿಯಂತ್ರಣಕ್ಕೆ ದೇಶದ ಗಡಿ ಕಾಯುವ ಸೈನಿಕರಂತೆ ಶ್ರಮಿಸುತ್ತಿರುವ ಕರೊನಾ ಸೇನಾನಿಗಳಾದ ವೈದ್ಯಕೀಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದು ಕಾಶಿ ಜಗದ್ಗುರು ಡಾ.ಚಂದ್ರಶೇಖರ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದ್ದಾರೆ.

    ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಕಾಡಸಿದ್ಧೇಶ್ವರ ಸಂಸ್ಥಾನ ಮಠದಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಸನ್ಮಾನ ಹಾಗೂ ಕೊಡೆ ವಿತರಣೆ
    ಸಮಾರಂಭದಲ್ಲಿ ಅವರು ಮಾತನಾಡಿದರು.

    ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು ಮಾತನಾಡಿ, ಕರೊನಾ ತಡೆಗೆ ಹೋರಾಡುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅವರಿಗೆ ಪ್ರೋತ್ಸಾಹಧನದ ಜತೆಗೆ ವಿಮೆ ಸೌಲಭ್ಯ ಕಲ್ಪಿಸಿಕೊಟ್ಟಿರುವುದು ಸಂತಸದ ವಿಚಾರ. ಸಾರ್ವಜನಿಕರು
    ಕರೊನಾ ಸೇನಾನಿಗಳಿಗೆ ಸಾಥ್ ನೀಡಬೇಕು ಎಂದು ಸಲಹೆ ನೀಡಿದರು.

    ಜೊಲ್ಲೆ ಉದ್ಯೋಗ ಸಮೂಹದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ, ಯಡೂರ, ಚಂದೂರ, ಇಂಗಳಿ, ಅಂಕಲಿ, ಕೆರೂರ, ಕಾಡಾಪುರ ಮತ್ತಿತರ ಗ್ರಾಮಗಳಲ್ಲಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡೆ ಮತ್ತು ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಮಾತ್ರೆ ವಿತರಿಸಲಾಯಿತು.
    ಆಶಾಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಅಂಬಿಕಾನಗರದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೀರೇಶ್ವರ ಸಂಸ್ಥೆಯ ನಿರ್ದೇಶಕ ಶಂಕರ ಶಾಹಿರ, ಈರಗೌಡಾ ಪಾಟೀಲ, ನವನಾಥ ಚವ್ಹಾಣ, ಅಣ್ಣಾಸಾಹೇಬ ಯಾದವ, ಮಾಯಾ ಭಿಲವಡೆ, ಸನತಕುಮಾರ ಪಾಟೀಲ, ಬಬನ ಭಿಲವಡೆ, ಅಣ್ಣಾಸಾಹೇಬ ಸಂಕೇಶ್ವರಿ, ದಾದಾಸೋ ಭೋಜಕರ, ತುಕಾರಾಮ ಪಾಟೀಲ ಇದ್ದರು. ಅಜಯ ಸೂರ್ಯವಂಶಿ, ದಿನೇಶ ಹೆದ್ದೂರೆ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts