More

    ಐವರು ಪೊಲೀಸರಿಗೆ ಪಾಸಿಟಿವ್

    ಕುಂದಾಪುರ: ಇಲ್ಲಿನ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಸಿಬ್ಬಂದಿ ಹಾಗೂ ಕುಂದಾಪುರ ಟ್ರಾಫಿಕ್ ಪೊಲೀಸ್ ಠಾಣೆಯ ಹೈವೇ ಪ್ಯಾಟ್ರೋಲ್ ಎಎಸ್‌ಐ ಹಾಗೂ ಚಾಲಕಗೆ ಕರೊನಾ ಸೋಂಕು ದೃಢವಾಗಿದೆ.

    ಎಲ್ಐಸಿ ರಸ್ತೆಯಲ್ಲಿರುವ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತದೆ. ಕುಂದಾಪುರ ಟ್ರಾಫಿಕ್ ಠಾಣೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಪಾಸಿಟಿವ್ ದೃಢಗೊಂಡ ಎಎಸ್ಪಿ ಕಚೇರಿ ಸಿಬ್ಬಂದಿ ಜುಲೈ 2ರಿಂದ ಹೋಂ ಕ್ವಾರಂಟೈನ್‌ಲ್ಲಿದ್ದು, ಟ್ರಾಫಿಕ್ ಠಾಣೆ ಎಎಸ್‌ಐ ಹಾಗೂ ಸಿಬ್ಬಂದಿ ಜುಲೈ 5ರಿಂದ ಕ್ವಾರಂಟೈನ್‌ನಲ್ಲಿದ್ದಾರೆ.

    ಎಎಸ್ಪಿ ಕಚೇರಿ ಕುಂದಾಪುರ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ಕಾರ್ಯನಿರ್ವಹಿಸಲಿದೆ. ಕುಂದಾಪುರ ಉಪವಿಭಾಗಕ್ಕೆ ಉಡುಪಿ ಡಿವೈಎಸ್ಪಿ ಅವರನ್ನು ಪ್ರಭಾರ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

    ಎಸ್‌ಐ, ಕಾನ್‌ಸ್ಟೆಬಲ್‌ಗೆ ದೃಢ: ಪುತ್ತೂರು ನಗರ ಮಹಿಳಾ ಪೊಲೀಸ್ ಠಾಣಾ ಎಸ್‌ಐ, 22 ವರ್ಷದ ಪುತ್ರಿ ಹಾಗೂ 45 ವರ್ಷದ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಸೋಮವಾರ 5 ಕರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಮೂರು ದಿನಗಳ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಒಬ್ಬರಿಗೆ ಕರೊನಾ ದೃಢಗೊಂಡ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಎಸ್‌ಐ ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್‌ನಲ್ಲಿದ್ದರು. ಈಗ ಎಸ್‌ಐ, ಪೊಲೀಸ್ ಸಿಬ್ಬಂದಿ ಸಹಿತ ಎಸ್‌ಐ ಪುತ್ರಿಗೂ ಕರೊನಾ ಪಾಸಿಟಿವ್ ದೃಢಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts