More

    ಲಸಿಕೆಗೆ ಹೆಚ್ಚು ಹಣ ಕೇಳುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ

    ಬೆಂಗಳೂರು: ಬೌರಿಂಗ್ ಆಸ್ಪತ್ರೆಯಲ್ಲಿ ಶನಿವಾರದಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೋವಿಡ್​ಗೆ ಸಂಬಂಧಿಸಿದ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ದರ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇಂದಿನಿಂದ ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ನೀಡುವ ಕಾರ್ಯಕ್ರಮ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದು ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ದಿನವಾಗಿದೆ ಎಂದು ಅವರು ಹೇಳಿದ್ದಾರೆ.

    ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲಿದೆ. ಕೇಂದ್ರದಿಂದ ಮೂರು ಲಕ್ಷ ಲಸಿಕೆ ಲಭ್ಯವಾಗಿದೆ. ನಮ್ಮ ಬಳಿ ಒಂದು ಲಕ್ಷ ಲಭ್ಯವಿದೆ. ಇನ್ನೂ ಹೆಚ್ಚು ಲಸಿಕೆ ಶೀಘ್ರದಲ್ಲೇ ದೊರೆಯುವ ನಿರೀಕ್ಷೆ ಇದೆ. ಈಗಾಗಲೇ ಎರಡು ದೇಶೀಯ ಲಸಿಕೆ ಲಭ್ಯವಿದೆ. ಈ ತಿಂಗಳಲ್ಲಿ ಇನ್ನೊಂದು ಲಸಿಕೆ ಲಭ್ಯವಾಗಲಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದರಿಂದ ಕರೊನಾ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಲಸಿಕೆಗೆ ಹೆಚ್ಚು ಹಣ ಕೇಳುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಬಿ.ಎಸ್.ಯಡಿಯೂರಪ್ಪ
    ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿ‌ ಮಾಡಲಾಗಿದೆ. ಜನರು ಸರ್ಕಾರದ ಮಾರ್ಗ ಸೂಚಿ ಪಾಲಿಸಬೇಕು. ಜನರು ಸಹಕಾರ ನೀಡಿದರೆ ಮಾತ್ರ ಕೋವಿಡ್ ನಿಯಂತ್ರಣ ಸಾಧ್ಯ. ಒಟ್ಟು 18 ವರ್ಷ ಮೇಲ್ಪಟ್ಟ 4 ಲಕ್ಷ ಯುವಕರಿಗೆ ಲಸಿಕೆ ನೀಡಲಾಗುವುದು. ಬಂದಿರೋದನ್ನು ಈಗ ನೀಡಲಾಗುತ್ತದೆ. ಹೊರ ದೇಶದಿಂದ ಲಸಿಕೆ ಬರುತ್ತಿದೆ. ಶೀಘ್ರವಾಗಿ ಎಲ್ಲವೂ ಸರಿಹೋಗಲಿದೆ. ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿಯವರು ಸಹಕಾರ ನೀಡುತ್ತಿದ್ದಾರೆ. ಇಂದಿನಿಂದ ನಮ್ಮಲ್ಲಿ ಖಾಲಿಯಾಗುವವರೆಗೂ ಲಸಿಕೆ ನಿಡುತ್ತೇವೆ ಎಂದು ಹೇಳಿದರು.
    ಈ ವೇಳೆ ಶಾಸಕ ರಿಜ್ವಾನ್ ಅರ್ಷದ್, ಸಂಸದ ಪಿ.ಸಿ.ಮೋಹನ್ , ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ ಉಪಸ್ಥಿತರಿದ್ದರು.

    ಬೇಡಿಕೊಂಡರೂ ಸಿಗದ ಬೆಡ್​; ಕಾರಿನಲ್ಲೇ ಕೊನೆಯುಸಿರೆಳೆದ ಸೋಂಕಿತೆ

    ಆ್ಯಂಕರ್ ಅರುಣ ಬಡಿಗೇರ ತಂದೆ-ತಾಯಿಯನ್ನು ಬಲಿ ತೆಗೆದುಕೊಂಡ ಕರೊನಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts