More

    ಮಾರ್ಚ್​ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ, ಆಯ್ದ 45 ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಲಭ್ಯ

    ನವದೆಹಲಿ: ಮಾರ್ಚ್ 1 ರಿಂದ ಭಾರತದಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಕೋಮಾರ್ಬಿಡಿಟೀಸ್ ಇರುವ 45 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಲಭ್ಯವಾಗಲಿದೆ. ಸರ್ಕಾರದ ಕರೊನಾ ಲಸಿಕಾ ಅಭಿಯಾನದ ಎರಡನೇ ಹಂತವಾಗಿ, 10,000 ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ಅಷ್ಟೆ ಅಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ದುಡ್ಡು ಕೊಟ್ಟು ಕರೊನಾ ಲಸಿಕೆ ಪಡೆಯಬಹುದಾಗಿದೆ.

    ಕೇಂದ್ರ ಸಚಿವ ಸಂಪುಟದಲ್ಲಿ ಇಂದು ಕೈಗೊಳ್ಳಲಾದ ನಿರ್ಧಾರಗಳನ್ನು ಮಾಧ್ಯಮದೊಂದಿಗೆ ಹಂಚಿಕೊಂಡ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಮಾಹಿತಿ ನೀಡಿದ್ದಾರೆ. 60 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟಿದ್ದು ಕೋಮಾರ್ಬಿಡಿಟೀಸ್ ಹೊಂದಿರುವವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮಾರ್ಚ್​ 1 ಆರಂಭವಾಗಲಿದೆ ಎಂದಿದ್ದಾರೆ.

    ಇದನ್ನೂ ಓದಿ: ಕರೊನಾ ನಿವಾರಣೆಗೆ ಪಣತೊಟ್ಟ ಸರ್ಕಾರ… ಲಸಿಕೆ ನಿರಾಕರಿಸಿದವರಿಗೆ ಶಿಕ್ಷೆ !

    ದೇಶದಾದ್ಯಂತ ಇರುವ 10,000 ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಸದರಿ ಗುಂಪಿಗೆ ಸೇರುವ ನಾಗರೀಕರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು. ಇದಕ್ಕಾಗಿ ಸರ್ಕಾರವು ಉತ್ಪಾದಕರಿಂದ ಲಸಿಕೆಗಳನ್ನು ಖರೀದಿಸಿ, ರಾಜ್ಯ ಸರ್ಕಾರಗಳಿಗೆ ಪೂರೈಸಲಿದೆ ಎಂದಿದ್ದಾರೆ.

    ಇದಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವ ಅವಕಾಶವೂ ಉಂಟು. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಇಚ್ಛಿಸುವವರು ಅದಕ್ಕಾಗಿ ದುಡ್ಡು ತೆರಬೇಕಾಗುವುದು. ಈ ರೀತಿ ತೆರಬೇಕಾಗುವ ಬೆಲೆಯನ್ನು 3-4 ದಿನಗಳಲ್ಲಿ ಆರೋಗ್ಯ ಸಚಿವಾಲಯವು ನಿರ್ಧರಿಸಿ ತಿಳಿಸಲಿದೆ. ಈ ಬಗ್ಗೆ ಉತ್ಪಾದಕರು ಮತ್ತು ಆಸ್ಪತ್ರೆಗಳ ಮಾಲೀಕರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಾವಡೇಕರ್ ತಿಳಿಸಿದ್ದಾರೆ. (ಏಜೆನ್ಸೀಸ್)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ದೆಹಲಿಗೆ ಹೋಗುವ ಪ್ರಯಾಣಿಕರಿಗೆ ಬೇಕು ಕರೊನಾ ನೆಗೆಟೀವ್ ವರದಿ

    ಕರೊನಾ ನಿಯಮ ಮರೆತು ಮಾಸ್ಕ್ ಇಲ್ಲದೆ ರಾಂಪ್ ವಾಕ್ ಮಾಡಿದ ಮಹಾರಾಷ್ಟ್ರದ ಮೇಯರ್!

    ಆಸ್ಪತ್ರೆಯ ಡ್ರೆಸ್ ಚೇಂಜಿಂಗ್ ರೂಮಲ್ಲಿ ಕ್ಯಾಮೆರಾ! ಮೊಬೈಲ್ ಚಾರ್ಜ್​ಗೆ ಹಾಕಿ ರೆಕಾರ್ಡಿಂಗ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts