

ಬೆಂಗಳೂರು: ಕರೊನಾ ವೈರಸ್ ಸೋಂಕು ತಗಲುವ ಭೀತಿಯಿಂದ ಜನರು ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ಸದಾ ಜನರಿಂದ ಗಿಜಿಗಿಡುತ್ತಿದ್ದ ಶಾಪಿಂಗ್ ಮಾಲ್, ಹೋಟೆಲ್ ಮತ್ತು ಸಿನಿಮಾ ಥಿಯೇಟರ್ಗಳೆಲ್ಲ ಖಾಲಿ ಹೊಡೆಯುತ್ತಿವೆ.
ಏರ್ಲೈನ್ಸ್, ಕೈಗಾರಿಕೆ, ಹೋಟೆಲ್ ಸೇರಿ ಬಹಳಷ್ಟು ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟು ಕ್ಷೀಣಿಸಿದೆ. ಪ್ರತಿದಿನ ಸಾವಿರಾರು ಕೋಟಿ ರೂ. ನಷ್ಟವಾಗುತ್ತಿದೆ. ಲಕ್ಷಾಂತರ ಉದ್ಯೋಗಸ್ಥರ ಜೀವನ ನಿರ್ವಹಣೆಗೆ ತೊಡಕು ಉಂಟಾಗಿದೆ.
ಪ್ರವಾಸಿ ತಾಣದಲ್ಲೂ ಜನರಿಲ್ಲ: ಪ್ರವಾಸಿತಾಣಗಳಿಗೂ ಕರೊನಾ ವೈರಸ್ನ ಬಿಸಿ ತಟ್ಟಿದೆ. ಪ್ರವಾಸಕ್ಕಾಗಿ ಮಾಡಿದ್ದ ಬುಕ್ಕಿಂಗ್ ಅನ್ನು ಜನರು ರದ್ದುಪಡಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳು ಬಿಕೋ ಎನ್ನುತ್ತಿವೆ. ಜನರಿಂದ ಗಿಜಿಗುಡುತ್ತಿದ್ದ ಶಾಪಿಂಗ್ ಮಾಲ್, ಚಿತ್ರಮಂದಿರಗಳು ಜನರಿಲ್ಲದೆ ಭಣಗುಡುತ್ತಿವೆ. ಮಲ್ಟಿಪ್ಲೆಕ್ಸ್ಗಳಲ್ಲಿ ಸಿನಿಮಾ ನೋಡುವವರ ಸಂಖ್ಯೆ ಶೇ.20
ಹಾಗೂ ಏಕಪರದೆ ಚಿತ್ರಮಂದಿರಗಳಲ್ಲಿ ವೀಕ್ಷಕರ ಸಂಖ್ಯೆ ಶೇ.5 ಇಳಿದಿದೆ. ಚಿಕನ್-ಮಟನ್ ಖರೀದಿಸುವವರ ಸಂಖ್ಯೆ ಶೇ.50 ಕ್ಷೀಣಿಸಿದೆ. ಜನಸಂದಣಿ ಹೆಚ್ಚಿರುವ
ಕಡೆ ಓಡಾಡುವುದರಿಂದ ಕರೊನಾ ಸೋಂಕು ತಗುಲಬಹುದು ಎಂಬ ಆತಂಕದಲ್ಲಿ ಅಂಥ ಪ್ರದೇಶಗಳಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ.