More

    ಕರೊನಾ ವೈರಸ್ ತಡೆಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯ: ಡಿಸಿಎಂ ಸಚಿವ ಲಕ್ಷ್ಮಣ ಸವದಿ

    ಲಿಂಗಸುಗೂರು: ಮೇ 3ರ ವರೆಗೆ ಇರುವ ಲಾಕ್‌ಡೌನನ್ನು ಬಹುತೇಕ ರಾಜ್ಯದ ಸಿಎಂಗಳು ಮೇ 15 ರವರೆಗೆ ಮುಂದುವರಿಸುವ ಪ್ರಸ್ತಾಪಿಸಿದ್ದಾರೆ. ಬೇರೆ ರಾಜ್ಯದ ಬಗ್ಗೆ ತುಲನೆ ಮಾಡಿದರೆ ನಮ್ಮಲ್ಲಿ ಸೋಂಕಿತರ ಸಂಖ್ಯೆ ಕಡಿಮೆ. ಆದರೂ, ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

    ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಯಚೂರು ಜಿಲ್ಲೆಯಲ್ಲಿ ಸೋಂಕಿತರು ಕಂಡು ಬಂದಿಲ್ಲ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತ ಜಾಗೃತಿ ಕೊರತೆ ಕಾಣುತ್ತಿದೆ. ಕರೊನಾ ವಾರಿಯರ್ಸ್‌ ಮೇಲೆ ಹಲ್ಲೆ ನಡೆಸುವವರ ಆಸ್ತಿ ಮುಟ್ಟುಗೋಲು ಹಾಕುವ ಕಠಿಣ ಕಾನೂನು ಜಾರಿಯಾಗಿದೆ ಎಂದರು.

    ರಾಯಚೂರು ಜಿಲ್ಲೆಯ ಕೆಲವೆಡೆ ಅಕಾಲಿಕ ಆಲಿಕಲ್ಲು ಮಳೆಗೆ ಭತ್ತ ಹಾನಿಗೀಡಾದ ಬಗ್ಗೆ ಕೃಷಿ ಇಲಾಖೆಯಿಂದ ವರದಿ ಪಡೆದು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಬೇಸಿಗೆ ನಿಮಿತ್ತ ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ಅಭಾವ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts