More

    ಸ್ವಂತ ಖರ್ಚಿನಲ್ಲಿ ಕೋವಿಡ್​ ಪರೀಕ್ಷೆ ಮಾಡಿಸಿ, ಕರೊನಾ ವಾರಿಯರ್ಸ್​ಗೆ ಸರ್ಕಾರದ ಸೂಚನೆ

    ಬೆಂಗಳೂರು: ನಗರದ ಜನತೆಯ ಹಿತದೃಷ್ಟಿಯಿಂದ ಹಗಲು ರಾತ್ರಿಯೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್​ಗೆ ಹಣ ಕೊಟ್ಟು ಕೋವಿಡ್​ ಪರೀಕ್ಷೆಗೆ ಒಳಗಾಗುವಂತೆ ಸರ್ಕಾರ ಸೂಚನೆ ಹೊರಡಿಸಿದೆ. ತನ್ಮೂಲಕ ರಾಜ್ಯ ಸರ್ಕಾರ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

    ಸರ್ಕಾರಿ ಪ್ರಯೋಗಾಲಯಗಳಿಂದ ಕೋವಿಡ್​ ವರದಿ ಬರುವುದು ತಡವಾಗುತ್ತಿರುವ ಕಾರಣ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡುವಂತೆ ಸರ್ಕಾರ ಕರೊನಾ ವಾರಿಯರ್ಸ್​ಗೆ ಸೂಚಿಸಿದೆ. ಇದರಿಂದಾಗಿ ಅವರೆಲ್ಲರೂ 1,500 ರೂಪಾಯಿ ಪಾವತಿಸಿ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಬೇಕಾದ ಅನಿವಾರ್ಯತೆ ಸಿಲುಕಿಕೊಂಡಿದ್ದಾರೆ.

    ಇದನ್ನೂ ಓದಿ: ನನ್ನ ಮಗ ಶರಣಾಗದಿದ್ದರೆ ಕೊಂದು ಬಿಡಿ ಎಂದಿದ್ದ ದುಬೆ ತಾಯಿ ಈಗ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದೇಕೆ?

    ಈಶಾನ್ಯ ಮತ್ತು ಉತ್ತರ ಠಾಣೆಳಿಗೆ ಸೂಚನೆ ರವಾನೆ: ಬೆಂಗಳೂರು ನಗರದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಕರ್ತವ್ಯ ನಿರತ ಪೊಲೀಸ್​ ಸಿಬ್ಬಂದಿ ಕರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದರಿಂದಾಗಿ ಹಲವು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಕೆಲದಿನಗಳ ಹಿಂದೆ ಪೊಲೀಸ್​ ಆಯುಕ್ತರ ಕಚೇರಿಯನ್ನೂ ಸೀಲ್​ಡೌನ್​ ಮಾಡಲಾಗಿತ್ತು.

    ಹೀಗಿದ್ದೂ, ಹಣ ಕೊಟ್ಟ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್​ ಪರೀಕ್ಷೆಗೆ ಒಳಪಡುವಂತೆ ಬೆಂಗಳೂರು ನಗರದ ಈಶಾನ್ಯ ಮತ್ತು ಉತ್ತರ ವಿಭಾಗದ ಎಲ್ಲ ಠಾಣೆಗಳಲ್ಲೂ ನೋಟಿಸ್​ ಅಂಟಿಸಲಾಗಿದೆ. ಹೀಗಾಗಿ ತಮ್ಮ ಕುಟುಂಬದವರ ಹಿತದೃಷ್ಟಿಯಿಂದ ಕೋವಿಡ್​ ಪರೀಕ್ಷೆಗೆ ಒಳಪಡಲು ಬಯಸಿದರೂ ಹಣ ಕೊಡಬೇಕಾದ ಅನಿವಾರ್ಯತೆಯ ಬಗ್ಗೆ ಪೊಲೀಸ್​ ಸಿಬ್ಬಂದಿ ಅಲವತ್ತುಕೊಂಡಿದ್ದಾರೆ.

    ಕಾಲೇಜು, ವಿಶ್ವವಿದ್ಯಾಲಯಗಳ ಪರೀಕ್ಷೆಗಳೂ ರದ್ದು; ಇವರೇ ಭಾಗ್ಯವಂತರು…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts