More

    ಕರೊನಾದಿಂದ ಚೇತರಿಸಿಕೊಂಡ ಲಂಡನ್‌ ಪ್ರಧಾನಿ: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

    ಲಂಡನ್‌ : ಕರೊನಾ ಸೋಂಕಿನಿಂದ ಬಳಲುತ್ತಿದ್ದ ಯುನೈಟೆಡ್‌ ಕಿಂಗ್‌ಡಮ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ (55)ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಅವರು ಕೂಡಲೇ ತಮ್ಮ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ತಿಳಿಸಲಾಗಿದೆ.

    ಕರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಎರಡು ವಾರಗಳ ಹಿಂದೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ನಂತರ ವೈರಸ್‌ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದ್ದ ಕಾರಣ, ಕಳೆದ ಭಾನುವಾರ ಅವರನ್ನು ಲಂಡನ್‌ನ ಸೇಂಟ್‌ ಥಾಮಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ರಾತ್ರಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ನಂತರ ಗುರುವಾರ ಆರೋಗ್ಯದಲ್ಲಿ ಸುಧಾರಣೆ ಕಂಡ ಕಾರಣ, ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು.

    ‘ಆರೋಗ್ಯದಲ್ಲಿ ಇನ್ನೂ ಸುಧಾರಣೆ ಆಗಬೇಕಿರುವ ಕಾರಣ, ಪ್ರಧಾನಿಯವರು ಕೂಡಲೇ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸ್ವಲ್ಪ ಸಮಯ ಅವರು ರೆಸ್ಟ್‌ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ಹೇಳಿವೆ.

    ಪ್ರಧಾನಿ ಅವರನ್ನು ಇಷ್ಟೊಂದು ಕಾಳಜಿಯಿಂದ ಚಿಕಿತ್ಸೆ ನೀಡಿದುದಕ್ಕಾಗಿ ಅವರ ಭಾವಿ ಪತ್ನಿ, ಕೇರ್‌ ಸಿಮೋಂಡ್ಸ್‌ ಟ್ವಿಟರ್‌ ಮೂಲಕ ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ್ದಾರೆ. ಆರು ತಿಂಗಳ ಗರ್ಭಿಣಿಯಾಗಿರುವ ಕೇರ್‌, ತಮ್ಮ ಭಾವಿ ಪತಿಯ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿರುವ ಎಲ್ಲರಿಗೂ ಟ್ವೀಟ್‌ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

    ಲಂಡನ್‌ನಲ್ಲಿ ಇಲ್ಲಿಯವರೆಗೆ ಕರೊನಾ ವೈರಸ್‌ಗೆ 10 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್‌)

    ಮಹಾಮಾರಿ ಕರೊನಾ ವೈರಸ್​ ಹರಡುವಿಕೆ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ನೂತನ ಸಂಶೋಧನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts