More

    ಕರೊನಾ ಸೋಂಕಿನಿಂದ ಚೇತರಿಸಿಕೊಂಡ ಪ್ರಧಾನಿ ಕೆಲಸಕ್ಕೆ ಹಾಜರ್​

    ಬಕಿಂಗ್​ಹ್ಯಾಮ್ (ಲಂಡನ್‌): ಕರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್​ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೋಮವಾರ ಕೆಲಸಕ್ಕೆ ಹಾಜರಾಗಿದ್ದಾರೆ.

    ಕರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಈ ತಿಂಗಳ ಆರಂಭದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ನಂತರ ವೈರಸ್‌ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪರಿಸ್ಥಿತಿ ಸ್ವಲ್ಪ ಗಂಭೀರವಾಗಿದ್ದ ಕಾರಣ, ಅವರನ್ನು ಲಂಡನ್‌ನ ಸೇಂಟ್‌ ಥಾಮಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ರಾತ್ರಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡ ಕಾರಣ, ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು.

    ಇದೇ 12ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದರೂ, ಆರೋಗ್ಯದಲ್ಲಿ ಇನ್ನೂ ಸುಧಾರಣೆ ಆಗಬೇಕಿರುವ ಕಾರಣ, ಪ್ರಧಾನಿಯವರು ಕೂಡಲೇ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿದ್ದವು. ಬಿಡುಗಡೆಯ ನಂತರ ತಮ್ಮ ನಿವಾಸ ಬಕಿಂಗ್ ಹ್ಯಾಮ್ ಶೈರ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡಿನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಉಪ ಪ್ರಧಾನಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಇದೀಗ ಬೋರಿಸ್‌ ಜಾನ್ಸನ್‌ ಶೀಘ್ರದಲ್ಲಿ ಚೇತರಿಸಿಕೊಂಡಿದ್ದು, ಸೋಮವಾರದಿಂದ ಕೆಲಸಕ್ಕೆ ಹಾಜರು ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ, ಇಂದು ಸಂಪುಟ ಸಹೋದ್ಯೋಗಿಗಳ ಜತೆ ಕರೊನಾಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವ ಸಾಧ್ಯತೆಯಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts