ತುರ್ತು ಸಭೆ ಕರೆದ ಸಿಎಂ: ಕರೊನಾ ತಡೆಗೆ ಕಠಿಣ ನಿಯಮ ಸಾಧ್ಯತೆ

bsy
bsy
Published on

ಬೆಂಗಳೂರು: ಕರೊನಾ ಪರಿಸ್ಥಿತಿ ಕೈಮುಗಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಸಚಿವರು ಸೇರಿ ಕೆಲವು ಸಚಿವರಿಗೆ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಬೆಂಗಳೂರಿನಲ್ಲಿ ವಿಪರೀತ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ಜವಾಬ್ದಾರಿ ಹಂಚಿಕೆ ಬಗ್ಗೆಯೂ ತೀರ್ಮಾನವಾಗಲಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net