More

    ರಾಜ್ಯದಲ್ಲಿ ಕಿಲ್ಲರ್​ ಕರೊನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳು ಸ್ತಬ್ಧ

    ಬೆಂಗಳೂರು: ದೇಶದಲ್ಲಿ ವೇಗವಾಗಿ ಹರಡುತ್ತಿರುವ ಕರೊನಾ ವೈರಸ್​ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ತುರ್ತು ಸಭೆಯಲ್ಲಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ​

    ಕರ್ನಾಟಕ ರಾಜ್ಯದಲ್ಲಿ ಕೋವಿಡ್ ವೈರಾಣುವನ್ನು ನಿಗ್ರಹ ಮಾಡುವ ದೃಷ್ಟಿಯಿಂದ ಕೈಗೊಂಡಿರುವ ತುರ್ತು ನಿರ್ಧಾರಗಳು ಹೀಗಿವೆ
    1. ಪ್ರಸಕ್ತ ವಿದ್ಯಮಾನಗಳನ್ನು ಪರಿಶೀಲಿಸಿ ಕೆಲವು ಮಹತ್ವ ಪೂರ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ನಾಳೆ ಕೂಡ ಸಾರ್ವಜನಿಕ ಸಾರಿಗೆ ಸೇವೆಯನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. ಎಲ್ಲಾ ಎ.ಸಿ. ಬಸ್ಸುಗಳ ಸಂಚಾರವನ್ನು 31ನೇ ಮಾರ್ಚ್ 2020ರವರೆಗೆ ಸ್ಥಗಿತಗೊಳಿಸಲಾಗುವುದು.

    2. ಈ ದಿನ ರಾತ್ರಿ 9 ಗಂಟೆಗೆ ಜನತಾ ಕರ್ಪೂ ಮುಗಿಯಲಿದೆ. ಆದರೆ,9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ.

    3. ನಾಳೆಯಿಂದ 31ನೇ ತಾರೀಖಿನವರೆಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಬೆಳಗಾವಿ ಸೇರಿದಂತೆ ಕೋವಿಡ್-19 ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು.

    4. ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸುವುದು.

    5.ಈ 9 ಜಿಲ್ಲೆಗಳಲ್ಲಿ ಅಂತರ್ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು 31ನೇ ಮಾರ್ಚ್ 2020ರವರೆಗೆ ಸ್ಥಗಿತಗೊಳಿಸಲಾಗುವುದು.

    ಕರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಮಾರ್ಚ್​ 31ರವರೆಗೆ ರಾಜ್ಯದ ಆರು ಜಿಲ್ಲೆಗಳು ಲಾಕ್​ಡೌನ್​

    PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts