More

    ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ: ಬೆಂಗಳೂರಿನ ಕಾರ್ಪೋರೇಟರ್ ಕುಟುಂಬಕ್ಕೂ ಬಂತಾ ಕರೊನಾ?

    ಬೆಂಗಳೂರು: ಟಿಪ್ಪು ನಗರದಲ್ಲಿ ಮೃತಪಟ್ಟ ಕರೊನಾ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಕೃ.ರಾ. ಮಾರುಕಟ್ಟೆ ವಾರ್ಡ್‌ನ ಸದಸ್ಯೆ ನಾಜೀಮ್ ಖಾನಮ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಗೃಹಬಂಧನದಲ್ಲಿರಲು ಸೂಚಿಸಲಾಗಿದೆ.

    ಮಂಗಳವಾರ ಟಿಪ್ಪುನಗರದಲ್ಲಿ ಮೃತಪಟ್ಟ ಕರೊನಾ ಸೋಂಕಿತ ವ್ಯಕ್ತಿಯೊಂದಿಗೆ ಒಟ್ಟು 75 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಅವರನ್ನು ಗುರುತಿಸಿ ಕ್ವಾರಂಟೈನ್ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಪಾಲಿಕೆ ಸದಸ್ಯೆ ನಾಜೀಮ್ ಖಾನಮ್ ಹಾಗೂ ಅವರ ಕುಟುಂಬದ ಸದಸ್ಯರೂ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಹೀಗಾಗಿ ಎಲ್ಲರನ್ನೂ ಕ್ವಾರಂಟೈನ್ ಮಾಡುವುದಕ್ಕೆ ಸೂಚಿಸಲಾಗಿದೆ ಎಂದು ಎಂದು ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ತಿಳಿಸಿದ್ದಾರೆ.

    ಈಗಾಗಲೇ ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್‌ಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಇಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಬಡವರಿಗೆ ಬಿಬಿಎಂಪಿಯಿಂದ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದ್ದು, ತರಕಾರಿ, ಹಣ್ಣು, ಔಷಧಿ ಖರೀದಿಗೂ ಕ್ರಮ ವಹಿಸಲಾಗಿದೆ.

    ಟಿಪ್ಪು ನಗರ ಸೇರಿ, ನಗರದ ಇತರೆ ಪ್ರದೇಶಗಳಲ್ಲಿ ಸ್ಥಳೀಯ ನಿವಾಸಿಗಳು ಪ್ರೇರಿತವಾಗಿ ರಸ್ತೆಗಳನ್ನು ಬಂದ್ ಮಾಡಿಕೊಂಡು ಪರಿಣಾಮಕಾರಿಯಾಗಿ ಲಾಕ್‌ಡೌನ್ ಪಾಲನೆ ಮಾಡುತ್ತಿದ್ದಾರೆ. ಹೀಗಾಗಿ ಬೇರೆ ಪ್ರದೇಶಗಳಲ್ಲಿ ಸೀಲ್‌ಡೌನ್ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

    ಮಾಸ್ಕ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಕೊಡ್ತಾರಂತೆ!: ಯಾವ ಏರಿಯಾದ ಬಂಕ್‌ಗಳಲ್ಲಿ? ಇಲ್ಲಿದೆ ನೋಡಿ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts