More

    FACT CHECK| ಕೇಂದ್ರ ಸರ್ಕಾರಿ ಉದ್ಯೋಗಿಗಳ ಕೆಲಸದ ಅವಧಿ ಹೆಚ್ಚಿಸಲಾಗಿದೆ ಎಂಬುದು ನಿಜವೆ?

    ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಅಧಿಕವಾಗಿ ಹರಡುತ್ತಿದೆ.

    ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆವರೆಗೆ ಕೆಲಸ ನಿರ್ವಹಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ವಾಟ್ಸಾಪ್​, ಫೇಸ್​ಬುಕ್​ ಸೇರಿದಂತೆ ಇತರೆ ಸಾಮಾಜಿಕ ಜಾಲ ತಾಣಗಳಲ್ಲಿ ಸುದ್ದಿಗಳು ಹರಡುತ್ತಿವೆ. ಆದರೆ ಇದು ಸುಳ್ಳು ಸುದ್ದಿ ಎಂದು ಪತ್ರಿಕಾ ಮಾಹಿತಿ ಬ್ಯೂರೋ ತಿಳಿಸಿದೆ.

    ಇದನ್ನೂ ಓದಿ VIDEO| ಕರೊನಾ ವಾರಿಯರ್ಸ್​ಗೆ ಸೈನಿಕರಿಂದ ವಾದ್ಯ ಗೌರವ

    ಕೇಂದ್ರ ಸರ್ಕಾರ ತನ್ನ ಉದ್ಯೋಗಿಳಿಗೆ ಕೆಲಸದ ಅವಧಿಯನ್ನು ದೀರ್ಘಗೊಳಿಸಿಲ್ಲ. ಸಾಮಾಜಿಕ ಜಾಲ ತಾಣದಲ್ಲಿ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ತಿಳಿಸಿದೆ.

    ಅಲ್ಲದೆ ಕೆಲವು ದಿನಗಳ ಹಿಂದೆ, ಕೇಂದ್ರ ಸರ್ಕಾರ ನೌಕರರ ಪ್ರಯಾಣ, ರಜೆ ಹಾಗೂ ವೈದ್ಯಕೀಯ ಭತ್ಯೆಗಳನ್ನು ಕಡಿತಗೊಳಿಸಲು ಸರ್ಕಾರ ಕೂಡ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿಕೂಡ ಹರಡಿದೆ. ಆದರೆ ಈ ರೀತಿಯ ಚಿಂತನೆಯನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಪತ್ರಿಕಾ ಮಾಹಿತಿ ಬ್ಯೂರೋ ತಿಳಿಸಿದೆ.

    ಕೇಂದ್ರ ಸರ್ಕಾರದ ಉದ್ಯೋಗಿಗಳ ಯಾವುದೇ ಸೌಲಭ್ಯವನ್ನು ಕಡಿತಗೊಳಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ. (ಏಜೆನ್ಸೀಸ್​)

    ಇದನ್ನೂ ಓದಿ VIDEO|ಲಾಕ್​ಡೌನ್​ ಸಮಯದಲ್ಲಿ ಮಂಡ್ಯದ ಮದ್ಯದ ಅಂಗಡಿಯಲ್ಲಿ ಇಲಿಗಳು ಕದ್ದು ಎಣ್ಣೆ ಕುಡಿದಿವೆಯಂತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts