More

    ಕರೊನಾ ಹರಡುವವರನ್ನು ಗುಂಡಿಟ್ಟು ಕೊಲ್ಲಿ ಎಂದ ಶಾಸಕ ರೇಣುಕಾಚಾರ್ಯ ವಿರುದ್ಧ ಪೊಲೀಸರಿಗೆ ದೂರು

    ದಾವಣಗೆರೆ: ಕರೊನಾ ವೈರಸ್ ಹರಡುವವರನ್ನು ಗುಂಡಿಟ್ಟು ಸಾಯಿಸಿದರೂ ತಪ್ಪೇನಿಲ್ಲ ಎಂದು ಹೇಳಿಕೆ ನೀಡಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್‌ಚಂದ್ರ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ರ ಉಲ್ಲಂಘನೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಶಾಸಕರ ಈ ರೀತಿಯ ಉಡಾಫೆಯ ಹೇಳಿಕೆಗಳು ಹೊಸದೇನಲ್ಲ. ಇಂತಹ ಹೇಳಿಕೆಗಳು ನಾಗರಿಕ ಸಮಾಜದ ಸ್ವಾಸ್ಥೃ ಹಾಳು ಮಾಡುತ್ತವೆ. ಒಂದು ಕೋಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಯಶಸ್ವಿಯಾಗುವುದಿಲ್ಲ. ರಾಜಕೀಯ ಕಾರಣಕ್ಕಾಗಿ ಕೋಮುಗಳ ಮಧ್ಯೆ ಬಿರುಕು ಮೂಡಿಸಿ, ಇಂಥ ಸಂದರ್ಭವನ್ನು ದುರುಪಯೋಗ ಮಾಡಿಕೊಳ್ಳುವವರ ಬಗ್ಗೆ ಸಮಾಜ ಎಚ್ಚರದಿಂದ ಇರಬೇಕಾಗುತ್ತದೆ. ಒಬ್ಬ ಶಾಸಕನಾಗಿ ಯಾರನ್ನೇ ಆಗಲಿ ಗುಂಡಿಕ್ಕಿ ಕೊಲ್ಲು ಎನ್ನುವುದು ನಾಗರಿಕ ಸಮಾಜದ ಲಕ್ಷಣವಲ್ಲ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

    ದೂರಿನಲ್ಲಿ ಮಾಡಿದ ಆರೋಪಕ್ಕೆ ಸಂಬಂಧಿಸಿ ದಾಖಲೆಗಳನ್ನು ಒದಗಿಸುವಂತೆ ಪೊಲೀಸರು ಸುಭಾಷ್‌ಚಂದ್ರ ಅವರಿಗೆ ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ದಾವಣಗೆರೆ ಎಸ್ಪಿ ಹನುಮಂತರಾಯ, ‘‘ಪ್ರಾಥಮಿಕ ವಿಚಾರಣೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅವರು ಯಾವ ಸಂದರ್ಭದಲ್ಲಿ ಏನು ಮಾತನಾಡಿದ್ದಾರೆ ಎಂದು ಪರಿಶೀಲನೆ ಮಾಡುತ್ತಿದ್ದೇವೆ’’ ಎಂದು ತಿಳಿಸಿದ್ದಾರೆ.

    ಹಬ್ಬ ಮುಗಿದ ಮರುದಿನ ವಿಶೇಷ ಪ್ರಾರ್ಥನೆಗೆ ಮನವಿ ಮಾಡಿ ಎಡವಟ್ಟು ಮಾಡಿಕೊಂಡ ಪಾಕ್​ ಪ್ರಧಾನಿ, ಟ್ವಿಟರ್​ನಲ್ಲಿ ಅಪಹಾಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts